)
-ಬೇರೊಬ್ಬನ ಜತೆ ಅಕ್ರಮ ಸಂಬಂಧ । ಇದೇ ವಿಚಾರಕ್ಕೆ ದಂಪತಿ ಮಧ್ಯೆ ಜಗಳ । ಪ್ರಿಯಕರನ ಜತೆ ಸೇರಿ ಉಸಿರುಗಟ್ಟಿಸಿ ಹತ್ಯೆ
---ಕನ್ನಡಪ್ರಭ ವಾರ್ತೆ ಬೆಂಗಳೂರು
ಪತಿಯನ್ನು ಉಸಿರುಗಟ್ಟಿಸಿ ಹತ್ಯೆಗೈದು, ಬಳಿಕ ಆತನಿಗೆ ಹೃದಯಾಘಾತವಾಗಿದೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೊಡ್ಡತೋಗೂರಿನ ನಿವಾಸಿ ಅನಿತಾ(36) ಮತ್ತು ಆಕೆಯ ಪ್ರಿಯಕರ ಮಧುಸೂದನ್ ರೆಡ್ಡಿ (46) ಬಂಧಿತರು.ಆರೋಪಿಗಳು ಅ.12 ರಂದು ಉಪೇಂದ್ರ(41) ಎಂಬಾತನನ್ನು ಉಸಿರುಗಟ್ಟಿಸಿ ಹತ್ಯೆಗೈದು, ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಂಬಿಸಿದ್ದರು. ಆದರೆ, ಉಪೇಂದ್ರ ಸಹೋದರ ರಾಜೇಂದ್ರ ಎಂಬುವರು ಅನುಮಾನ ವ್ಯಕ್ತಪಡಿಸಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-ಬಾಕ್ಸ್-ಉಸಿರುಗಟ್ಟಿಸಿ ಹತ್ಯೆ
--
ಕೆಲ ಹೊತ್ತಿನ ಅನಿತಾ, ತನ್ನ ಸಂಬಂಧಿಕರಿಗೆ ಕರೆ ಮಾಡಿ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಬಂದಿದ್ದ ಪತಿ ಬಾತ್‌ರೂಮ್‌ಗೆ ಹೋಗುವಾಗ ಕಾಲು ಜಾರಿ ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾಳೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಉುಪೇಂದ್ರ ಸಹೋದರ ರಾಜೇಂದ್ರ, ಅಣ್ಣನ ಮೃತದೇಹ ಕಂಡು ಅನುಮಾನಗೊಂಡಿದ್ದಾನೆ. ಆರಂಭದಲ್ಲಿ ಸಹಜ ಸಾವು ದಾಖಲಿಸಿಕೊಂಡಿದ್ದ ಪೊಲೀಸರು, ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಹತ್ಯೆಗೈಯ್ಯಲಾಗಿದೆ ಎಂದು ವೈದ್ಯರ ನೀಡಿದ ವರದಿ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಅನಿತಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧ ವಿಚಾರಕ್ಕೆ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ನಂತರ ಇಬ್ಬರು ಆರೋಪಿಗಳ ಬಂಧಿಸಲಾಗಿದೆ.