ತಿರುಪತಿಗೆ ತೆರಳಿದ್ದಾಗ ಉದ್ಯಮಿ ಮನೆ ದೋಚಿದ ನೇಪಾಳಿ ವಾಚ್‌ಮನ್‌ ದಂಪತಿ

Published : Jun 02, 2025, 07:17 AM IST
theft in the house of a malayali family residing in saudi arabia

ಸಾರಾಂಶ

ಉದ್ಯಮಿಯೊಬ್ಬರು ಕುಟುಂಬ ಸಮೇತ ತಿರುಪತಿ ಪ್ರವಾಸಕ್ಕೆ ಹೋಗಿದ್ದ ವೇಳೆ ನೇಪಾಳ ಮೂಲದ ಕಾವಲುಗಾರ ದಂಪತಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಬೆಂಗಳೂರು : ಉದ್ಯಮಿಯೊಬ್ಬರು ಕುಟುಂಬ ಸಮೇತ ತಿರುಪತಿ ಪ್ರವಾಸಕ್ಕೆ ಹೋಗಿದ್ದ ವೇಳೆ ನೇಪಾಳ ಮೂಲದ ಕಾವಲುಗಾರ ದಂಪತಿ ನಗ-ನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಸ್ತ್ರಿ ನಗರದ ರಿಯಲ್‌ ಎಸ್ಟೇಟ್‌ ಉದ್ಯಮಿ, ಬಿಜೆಪಿಯ ರಮೇಶ್ ಬಾಬು ಅವರ ಮನೆಯಲ್ಲಿ ಎರಡು ಕೆಜಿ ಚಿನ್ನ, 10 ಲಕ್ಷ ರು. ನಗದು ಹಾಗೂ ಪರವಾನಿಗೆ ಹೊಂದಿದ್ದ ಪಿಸ್ತೂಲ್‌ ಕಳ್ಳತನವಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿರುವ ಅವರ ಮನೆ ಕಾವಲುಗಾರ ರಾಜ್ ಹಾಗೂ ದೀಪಾ ದಂಪತಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕಳೆದ ಮೂರು ತಿಂಗಳಿಂದ ರಾಜ್ ದಂಪತಿ ಮನೆಕೆಲಸಕ್ಕಿದ್ದರು. ಮೇ 27 ರಂದು ತಿರುಪತಿಗೆ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನಕ್ಕೆ ತೆರಳಿದ್ದಾಗ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ಸಂಪರ್ಕ ಸ್ಥಗಿತಗೊಳಿಸಿ ಈ ಕೃತ್ಯ ಎಸಗಿದ್ದಾರೆ. ಪ್ರವಾಸ ಮುಗಿಸಿ ಮರಳಿದಾಗ ಘಟನೆ ಗೊತ್ತಾಯಿತು ಎಂದು ರಮೇಶ್‌ಬಾಬು ಪುತ್ರ ಮಹೇಶ್ ತಿಳಿಸಿದ್ದಾರೆ.

ನೇಪಾಳಿಗರ ಮೇಲೆ ನಂಬಿಕೆ ಹೋಗಿದೆ. ಅವರ ಪೂರ್ವಾಪರ ಮಾಹಿತಿ ಸರಿಯಾಗಿ ಸಂಗ್ರಹಿಸದೆ ತಪ್ಪು ಮಾಡಿದ್ದೇವೆ. ಈ ಪ್ರಮಾದವನ್ನು ಬೇರೆ ಯಾರೂ ಮಾಡಬಾರದು. ಮನೆಯಿಂದ ಹೊರಟ ಬಳಿಕ ತಮ್ಮ ಸ್ನೇಹಿತರನ್ನು ಕರೆಸಿ ರಾಜ್ ದಂಪತಿ ಕಳ್ಳತನ ಮಾಡಿದ್ದಾರೆ ಎಂದು ಮಹೇಶ್ ಹೇಳಿದರು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌