ಕನ್ನಡಪ್ರಭ ವಾರ್ತೆ ಮಂಡ್ಯ
ಮೈಸೂರಿನ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ ನಿವಾಸಿ ಶ್ರೇಯಸ್‌ಗೌಡ (೨೦), ಪಾಂಡವಪುರ ಪಟ್ಟಣ ಮಾರಿಗುಡಿ ಬೀದಿಯ ಶಶಿಕುಮಾರ್ (೩೪), ವಿನೋದ ಅಲಿಯಾಸ್ ಮಾಡು (೪೧) ಬಂಧಿತ ಆರೋಪಿಗಳು. ಪಾಂಡವಪುರ ತಾಲೂಕು ಬೀರಶೆಟ್ಟಹಳ್ಳಿಯ ಕಾರು ಚಾಲಕ ಮಂಜುನಾಥ, ಶಾಂತಿನಗರದ ಅರುಣ್‌ಕುಮಾರ್ ಅಲಿಯಾಸ್ ಗಾಂಜಾ ಅರುಣ (೪೧), ವಿಜಯ್‌ಕುಮಾರ್ ಅಲಿಯಾಸ್ ವಿಜಿ ಎಂಬುವರು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳು ಈ ಗಾಂಜಾವನ್ನು ಒರಿಸ್ಸಾ ರಾಜ್ಯದ ಕೆಸ್ಸಿಂಗಾ ಎಂಬಲ್ಲಿಗೆ ಹೋಗಿ ಅಲ್ಲಿಂದ ಖರೀದಿ ಮಾಡಿಕೊಂಡು ಬಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ತಂದಿದ್ದರೆಂದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.ಆರೋಪಿಗಳು ಕೆಲ ದಿನಗಳ ಹಿಂದೆ ಬೆಳಗ್ಗೆ ೧೦.೩೦ರ ಸಮಯದಲ್ಲಿ ಪಾಂಡವಪುರ ತಾಲೂಕಿನ ಕುಂತಿಬೆಟ್ಟದ ಬಳಿಯ ಬಯಲು ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಟಾಟಾ ಇಂಡಿಗೋ ಕಾರಿ (ಕೆಎ-೪೧, ಎನ್-೬೨೫೮)ನಲ್ಲಿ ಅಕ್ರಮವಾಗಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಬರುವರೆಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಆರಕ್ಷಕ ಅಧೀಕ್ಷಕಿ ಡಾ.ವಿ.ಜೆ. ಶೋಭಾರಾಣಿ ಆದೇಶದ ಮೇರೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಎಸ್.ಇ.ಗಂಗಾಧರಸ್ವಾಮಿ ಹಾಗೂ ಶ್ರೀರಂಗಪಟ್ಟಣ ಉಪವಿಭಾಗದ ಆರಕ್ಷಕ ಉಪಾಧೀಕ್ಷಕ ಯು.ಡಿ.ಕೃಷ್ಣಕುಮಾರ್ ಮಾರ್ಗದರ್ಶನದಲ್ಲಿ ಪಾಂಡವಪುರ ಪೊಲೀಸ್ ಇನ್ಸ್‌ಪೆಕ್ಟರ್ ಎಚ್.ಪಿ.ಶರತ್‌ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಮಾರಾಟಕ್ಕೆ ಬಂದಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮೂವರು ಆರೋಪಿಗಳು ಅಲ್ಲಿಂದ ಪರಾರಿಯಾದರು ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.