ಪೆನ್‌ಡ್ರೈವ್ ಹಂಚಿಕೆ : ಲಿಖಿತ್‌, ಚೇತನ್‌ಗೆ ಜಾಮೀನು

Published : May 31, 2024, 07:53 AM IST
prajwal karnataka .jpg

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳುಳ್ಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಜಿಲ್ಲೆಯ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳುಳ್ಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಜಿಲ್ಲೆಯ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ ಮೇ 12 ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿತ್ತು,

 ಬಳಿಕ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಹದಿನೆಂಟು ದಿನಗಳ ಬಳಿಕ ಇಬ್ಬರೂ ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದು ಗುರುವಾರ ಸಂಜೆ ಅಥವಾ ಶುಕ್ರವಾರ ಇಬ್ಬರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಬ್ಬರು ಆರೋಪಿಗಳ ಪರ‌ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದರು.

PREV

Recommended Stories

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!
ಗ್ರಾಮ ಲೆಕ್ಕಿಗರ ಹುದ್ದೆಗೆ ನಕಲಿ ಅಂಗವಿಕಲ ಪ್ರಮಾಣಪತ್ರ ಸಲ್ಲಿಕೆ...!