ಪೋಕ್ಸೋ ಪ್ರಕರಣ: ಖಾಸಗಿ ಶಾಲೆಗೆ ಜಾರಿ

KannadaprabhaNewsNetwork |  
Published : Oct 10, 2023, 01:00 AM IST

ಸಾರಾಂಶ

ಹಿರೇಹಡಗಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಕನ್ನಡಪ್ರಭ ವಾರ್ತೆ ಹೂವಿನಹಡಗಲಿ ಹಿರೇಹಡಗಲಿ ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪದಡಿಯಲ್ಲಿ ಹಿರೇಹಡಗಲಿ ಕೆಪಿಟಿಸಿಎಲ್ ಸ್ಟೇಷನ್ ಮೆಕ್ಯಾನಿಕ್ ಕರ್ತವ್ಯದಲ್ಲಿರುವ ಕೊಟ್ರೇಶ ಬಾರ್ಕಿ ಎಂಬಾತನನ್ನು ಪೋಕ್ಸೊ ಕಾಯ್ದೆಯಡಿ ಇತ್ತೀಚೆಗೆ ಬಂಧಿಸಲಾಗಿದೆ. ಈ ಪ್ರಕರಣ ದಾಖಲಾದ ನಂತರ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಖಾಸಗಿ ಶಾಲೆಯಲ್ಲಿ ಆರ್‌ಟಿಇ ನಿಯಮ ಹಾಗೂ ವಿದ್ಯಾರ್ಥಿನಿಯರ ಸುರಕ್ಷತಾ ಮಾರ್ಗಸೂಚಿಗಳನ್ನು ಸ್ಪಷ್ಟ ಉಲ್ಲಂಘನೆಯಾಗಿದೆ. ಅನಧಿಕೃತ ವ್ಯಕ್ತಿಯನ್ನು ಶಾಲೆಯೊಳಗೆ ಬಿಟ್ಟುಕೊಂಡಿರುವುದು ತಪ್ಪು. ಈ ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಪೂಜಾರ್ ತಿಳಿಸಿದರು. ಈ ವರೆಗೂ ಅನುಮತಿ ಪಡೆಯದೆ ತೆರೆದಿರುವ ವಸತಿನಿಲಯ ಮುಚ್ಚುವಂತೆ ಸೂಚಿಸಲಾಗಿದೆ. ನೋಟಿಸ್‌ ನೀಡಿರುವ ಕಾಲಮಿತಿಯೊಳಗೆ ಸಂಬಂಧಪಟ್ಟ ಖಾಸಗಿ ಶಾಲೆಯವರು ನೋಟಿಸ್ ಗೆ ಉತ್ತರಿಸಬೇಕು. ಇಲ್ಲದಿದ್ದರೆ ಆಯಾ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಜರುಗಿಸಲು ಇಲಾಖೆಗೆ ಶಿಫಾರಸು ಮಾಡುತ್ತದೆ ಎಂದರು.

PREV

Recommended Stories

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!
ಗ್ರಾಮ ಲೆಕ್ಕಿಗರ ಹುದ್ದೆಗೆ ನಕಲಿ ಅಂಗವಿಕಲ ಪ್ರಮಾಣಪತ್ರ ಸಲ್ಲಿಕೆ...!