ಪ್ರಜ್ವಲ್‌ ಮೊಬೈಲ್‌ನಲ್ಲಿ 2000 ಅಶ್ಲೀಲ ಚಿತ್ರಗಳಿದ್ದವು : ಚಾಲಕ

Published : May 27, 2025, 12:16 PM IST
prajwal revanna

ಸಾರಾಂಶ

ಸಂಸದ ಪ್ರಜ್ವಲ್‌ ರೇವಣ್ಣ ಕಾರು ಚಾಲಕ ಕಾರ್ತಿಕ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜಗಾಗಿದ್ದು, ಪ್ರಜ್ವಲ್‌ ಮೊಬೈಲ್‌ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ಫೋಟೋಗಳು ಇದ್ದವು ಎಂಬುದಾಗಿ ಹೇಳಿಕೆ ನೀಡಿದ್ದಾರೆ.

 ಬೆಂಗಳೂರು : ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಾರು ಚಾಲಕ ಕಾರ್ತಿಕ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜಗಾಗಿದ್ದು, ಪ್ರಜ್ವಲ್‌ ಮೊಬೈಲ್‌ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ಫೋಟೋಗಳು ಇದ್ದವು ಎಂಬುದಾಗಿ ಹೇಳಿಕೆ ನೀಡಿದ್ದಾರೆ.

ಪ್ರಕರಣ ವಿಚಾರಣೆ ನಡೆಸುತ್ತಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುತ್ತಿದೆ. ಈ ಸಂಬಂಧ ಸೋಮವಾರ ಪ್ರಜ್ವಲ್‌ ಕಾರ್‌ ಚಾಲಕ ಕಾರ್ತಿಕ್‌ ಹೇಳಿಕೆಯನ್ನು ನ್ಯಾಯಾಲಯವು ದಾಖಲಿಸಿದೆ. ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಶ್ಲೀಲ ಫೋಟೋ, 40ಕ್ಕೂ ಹೆಚ್ಚು ವಿಡಿಯೋಗಳಿದ್ದವು ಎಂದು ತಿಳಿಸಿದ್ದಾರೆ.

2009ರಿಂದ ಎಚ್‌.ಡಿ.ರೇವಣ್ಣ ಬಳಿ ಚಾಲಕನಾಗಿದ್ದು, ಭವಾನಿ ರೇವಣ್ಣ, ಸೂರಜ್‌ ರೇವಣ್ಣ ಬಳಿಯೂ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಪ್ರಜ್ವಲ್‌ ರೇವಣ್ಣ ಕಾರಿನಲ್ಲಿಯೇ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು. ಆ ಸಂದರ್ಭದಲ್ಲಿ ಅವರ ಕಡೆ ತಿರುಗಿದಾಗ ಫೋನ್‌ ತಿರುಗಿಸಿಕೊಳ್ಳುತ್ತಿದ್ದರು ಎಂಬುದಾಗಿ ಸಾಕ್ಷ್ಯ ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ಅವರೊಂದಿಗೆ ಮನಸ್ತಾಪವಾಗಿದ್ದರಿಂದ 2022ರಲ್ಲಿ ಕೆಲಸ ಬಿಟ್ಟಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದೆ. ವಿವಾದವನ್ನು ಬಗೆಹರಿಸುವುದಾಗಿ ಹೇಳಿ ಕರೆಸಿಕೊಂಡಿದ್ದ ಅವರು ವಿಡಿಯೋ ಬಗ್ಗೆ ಪ್ರಸ್ತಾಪಿಸದಂತೆ ತಿಳಿಸಿದ್ದರು. ವಕೀಲ ದೇವರಾಜೇಗೌಡ ಅವರು ಪ್ರಕರಣ ಸಂಬಂಧ ಸಾಕ್ಷಿ ನೀಡುವಂತೆ ಹೇಳಿದಾಗ ಫೋಟೋ, ವಿಡಿಯೋಗಳ ಪೆನ್‌ಡ್ರೈವ್‌ ನೀಡಿದ್ದೆ ಎಂದು ಹೇಳಿದ್ದಾರೆ. ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯವು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

PREV
Read more Articles on

Recommended Stories

ಮೈಸೂರು ಫ್ಯಾಕ್ಟರಿ ಕೇಸಲ್ಲಿ ₹390 ಕೋಟಿಯ ಡ್ರಗ್ಸ್ ವಶ
ನೂರಾರು ಶವ ಹೂತ ಪ್ರಕರಣ : 13 ಸ್ಥಳ ಗುರುತಿಸಿದ ಅನಾಮಿಕ