ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದ ಬಳಿಕ ಮುನಿರತ್ನ ತಪ್ಪಿಸಿಕೊಂಡಿದ್ದರು. ಆ ವೇಳೆ ತಮ್ಮ ಬಳಿ ಇದ್ದ ಕೆಲವು ಅಶ್ಲೀಲ ವಿಡಿಯೋ, ಅಡಿಯೋ ಹಾಗೂ ಭಾವಚಿತ್ರಗಳನ್ನು ನಾಶ ಮಾಡಿರುವ ಶಂಕೆ ಇದೆ ಎಂದು ಮೂಲಗಳು ಹೇಳಿವೆ. ಶಾಸಕರ ವಿರುದ್ಧ ಹನಿಟ್ರ್ಯಾಪ್ ಆರೋಪಕ್ಕೆ ಅಸಲಿ ವಿಡಿಯೋಗಳು ಪ್ರಮುಖ ಪುರಾವೆಗಳಾಗುತ್ತವೆ. ಹೀಗಾಗಿ ಅಸಲಿ ವಿಡಿಯೋಗಳಿಗೆ ತನಿಖೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಐಟಿಗೆ ಅಧಿಕಾರಿ-ಸಿಬ್ಬಂದಿ ನಿಯೋಜನೆ:
ಪಡಿಸಿರುವಮುನಿರತ್ನ ವಿರುದ್ಧದ ಅತ್ಯಾಚಾರ, ಜೀವ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಮೂವರು ಡಿವೈಎಸ್ಪಿಗಳು ಸೇರಿದಂತೆ 25 ಮಂದಿ ಅಧಿಕಾರಿ-ಸಿಬ್ಬಂದಿಯನ್ನು ನಿಯೋಜಿಸಿ ರಾಜ್ಯ ಪೊಲೀಸ್ ಇಲಾಖೆ ಸೋಮವಾರ ಆದೇಶಿಸಿದೆ. ಸಿಸಿಬಿ ಎಸಿಪಿ ಎಚ್.ಎನ್.ಧರ್ಮೇಂದ್ರ, ಚಿಕ್ಕಬಳ್ಳಾಪುರ ಸಿಇಎನ್ ಡಿವೈಎಸ್ಪಿ ರವಿಕುಮಾರ್, ಕೇಂದ್ರ ವಲಯ ಐಜಿಪಿ ಕಚೇರಿಯ ಡಿವೈಎಸ್ಪಿ ಕವಿತಾ, ವಿಜಯಪುರ ಠಾಣೆ ಇನ್ಸ್‌ಪೆಕ್ಟರ್ ಸುನೀಲ್, ಐಎಸ್‌ಡಿ ಇನ್ಸ್‌ಪೆಕ್ಟರ್ ಬಾಲರಾಜ್ ಹಾಗೂ ಡಿಎಸ್‌ಬಿ ವಿಭಾಗದ ಇನ್ಸ್‌ಪೆಕ್ಟರ್ ಅವಿನಾಶ್ ಸೇರಿದಂತೆ 25 ಪೊಲೀಸರು ಎಸ್‌ಐಟಿ ತಂಡ ಸೇರಿದ್ದಾರೆ. ಈಗಾಗಲೇ ಎಸ್‌ಐಟಿ ತಂಡಕ್ಕೆ ಎಡಿಜಿಪಿ ಬಿ.ಕೆ.ಸಿಂಗ್ ಸಾರಥ್ಯವಿದ್ದು, ಕೇಂದ್ರ ವಲಯದ ಐಜಿಪಿ ಲಾಬೂರಾಮ್, ರೈಲ್ವೆ ಎಸ್ಪಿ ಡಾ.ಎಸ್.ಕೆ.ಸೌಮ್ಯಲತಾ ಹಾಗೂ ಎಸ್ಪಿ ಸಿ.ಎ.ಸೈಮನ್ ಸದಸ್ಯರಾಗಿದ್ದಾರೆ.
ಇಂದು ಮುನಿರತ್ನ ಎಸ್ಐಟಿ ವಶ: ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ವಶಕ್ಕೆ ನೀಡುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಸೋಮವಾರ ಮನವಿ ಮಾಡಿದೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿ ಮಂಗಳವಾರ ನ್ಯಾಯಾಲಯ ಆದೇಶಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.