ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 13 ವರ್ಷ ಶಿಕ್ಷೆ, 35 ಸಾವಿರ ರು. ದಂಡ

KannadaprabhaNewsNetwork |  
Published : Feb 16, 2024, 01:52 AM ISTUpdated : Feb 16, 2024, 02:52 PM IST
rape rajasthan

ಸಾರಾಂಶ

ಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯಅಪ್ರಾಪ್ತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 13 ವರ್ಷ ಶಿಕ್ಷೆ , 30 ಸಾವಿರ ರು. ದಂಡ ವಿಧಿಸಿ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ.ನಾಗಜ್ಯೋತಿ ತೀರ್ಪುನೀಡಿದ್ದಾರೆ. 

ಸುಭಾಷ್‌ನಗರ (ನೂರಡಿ ರಸ್ತೆ)ದ ಎಂ.ಎಸ್. ಮಹೇಶ್ ಶಿಕ್ಷೆಗೆ ಗುರಿಯಾದ ಆರೋಪಿ.ಕಳೆದ 2022ರಲ್ಲಿ ಆರೋಪಿ ಮಹೇಶ್ 16 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ತನ್ನ ಕಾರಿನಲ್ಲಿ ನಗರದ ಕಲಾಮಂದಿರದ ಹಿಂಭಾಗದ ರಸ್ತೆಗೆ (ಸೆಸ್ಕ್ ಕಚೇರಿಗೆ ಹೋಗುವ ರಸ್ತೆ) ಕರೆದೊಯ್ದು ಅತ್ಯಾಚಾರ ನಡೆಸಿದ್ದನು.

ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿ ಹಾಗೂ ಪೋಷಕರು ದೂರು ನೀಡಿದ್ದರು. ವಿಚಾರಣೆ ನಡೆಸಿದ ಅಂದಿನ ಇನ್ಸ್ ಪೆಕ್ಟರ್ ಎಸ್.ಕೆ. ಕೃಷ್ಣ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಫೋಕ್ಸೋ ಕಾಯ್ದೆಯಡಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ. ನಾಗಜ್ಯೋತಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಮಹೇಶ್‌ಗೆ ಕಲಂ 345(2ಇ) ಅಡಿಯಲ್ಲಿನ ಅಪರಾಧಕ್ಕೆ ಒಂದು ವರ್ಷ ಶಿಕ್ಷೆ, 5 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾದಾ ಶಿಕ್ಷೆ ಹಾಗೂ ಕಲಂ 376(2)(ಐ) ಅಡಿಯಲ್ಲಿನ ಅಪರಾಧಕ್ಕೆ 12 ವರ್ಷಗಳ ಶಿಕ್ಷೆ, 30 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಪಿಡಬ್ಲ್ಯುಡಿ ಎಇಇ ಮನೆ ಮೇಲೆ ಲೋಕಾ ದಾಳಿ
₹7 ಕೋಟಿ ಜಪ್ತಿ ಹಣ ರಕ್ಷಣೆಗೆ ರಾತ್ರಿ ಪೊಲೀಸ್‌ ಠಾಣೆಯೇ ಬಂದ್‌?