ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಹೊರವಲಯದ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ಪೋಷಕ ನಟಿ ಹೇಮಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಕಳೆದ ಆರು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ನಟಿ ಹೇಮಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಹೇಮಾಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಜಾಮೀನು ಸಿಕ್ಕರೂ ಬುಧವಾರ ಹೇಮಾಗೆ ಬಿಡುಗಡೆ ಭಾಗ್ಯ ಸಿಗಲಿಲ್ಲ. ಗುರುವಾರ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕವಷ್ಟೇ ಬಿಡುಗಡೆಯಾಗಲಿದ್ದಾರೆ.
ರೇವ್ ಪಾರ್ಟಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನಟಿ ಹೇಮಾಗೆ ಎರಡು ಬಾರಿ ನೋಟಿಸ್ ನೀಡಿತ್ತು. ಮೊದಲ ನೋಟಿಸ್ ಜಾರಿ ವೇಳೆ ಅನಾರೋಗ್ಯದ ನೆಪಹೇಳಿ ವಿಚಾರಣೆಗೆ ಗೈರಾಗಿದ್ದರು. ಎರಡನೇ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಜೂ.6ರಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಆಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಂಧಿಸಿ ಜೈಲಿಗೆ ಕರೆದೊಯ್ಯುವ ವೇಳೆ ನಟಿ ಹೇಮಾ ಹೈಡ್ರಾಮಾ ಸೃಷ್ಟಿಸಿದ್ದರು.
ಫಾರ್ಮ್ ಹೌಸ್‌ನ ರೇವ್ ಪಾರ್ಟಿಗೆ ಡ್ರಗ್ಸ್ ಪೂರೈಸಿದ್ದ ವಿದೇಶಿಗನ ಸೆರೆಕನ್ನಡಪ್ರಭ ವಾರ್ತೆ ಬೆಂಗಳೂರುಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಗೆ ಮಾದಕವಸ್ತು ಪೂರೈಕೆ ಮಾಡಿದ ಆರೋಪದಡಿ ಸಿಸಿಬಿ ಪೊಲೀಸರು ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.ಈ ಪ್ರಕರಣ ಸಂಬಂಧ ಈಗಾಗಲೇ ಸಿಸಿಬಿ ಪೊಲೀಸರು ಪಾರ್ಟಿ ಆಯೋಜಕ ಹೈದರಾಬಾದ್ ಮೂಲದ ವಾಸು, ತೆಲುಗು ನಟಿ ಹೇಮಾ ಸೇರಿ ಐವರನ್ನು ಬಂಧಿಸಿದ್ದಾರೆ. ಆರೋಪಿಗಳು ವಿಚಾರಣೆ ವೇಳೆ ಪಾರ್ಟಿಗೆ ಮಾದಕವಸ್ತು ಪೂರೈಕೆ ಮಾಡಿದ್ದವರ ಬಗ್ಗೆ ನೀಡಿದ ಮಾಹಿತಿ ಮೇರೆಗೆ ನೈಜೀರಿಯಾ ಪ್ರಜೆಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಈತನ ಬಂಧನದೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.ಪ್ರಕರಣದ ಹಿನ್ನೆಲೆ:ಮೇ 19ರಂದು ಎಲೆಕ್ಟ್ರಾನಿಕ್ ಸಿಟಿ ಹೊರವಲಯದ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀರು ದಾಳಿ ನಡೆಸಿ ಪಾರ್ಟಿಯಲ್ಲಿ ಭಾಗಿದ್ದ ನಟಿ ಹೇಮಾ ಸೇರಿದಂತೆ 103 ಮಂದಿಯನ್ನು ವಶಕ್ಕೆ ಪಡೆದಿದ್ದರು. ಪಾರ್ಟಿ ಸ್ಥಳದಲ್ಲಿ ಕೆಲ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕದ್ರವ್ಯ ಸೇವಿಸಿರುವುದು ದೃಢಪಟ್ಟಿತ್ತು.