ರೇಣುಕಾಸ್ವಾಮಿ ಕೊಲೆ ಕೇಸ್‌: ಬಂಧನಕ್ಕೊಳಗಾದ 103 ದಿನಗಳ ಬಳಿಕ ಜಾಮೀನಿಗೆ ದರ್ಶನ್‌ ಅರ್ಜಿ

Published : Sep 22, 2024, 10:43 AM IST
Actor Darshan

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್‌ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ನೀಡಿದ ನ್ಯಾಯಾಲಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ. ದರ್ಶನ್‌ ಪರ ವಕೀಲ ಎಸ್‌.ಸುನೀಲ್‌ ಕುಮಾರ್‌ ಅವರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದರು. ನ್ಯಾಯಾಧೀಶ ಜಯಶಂಕರ್‌ ಪ್ರಾಸಿಕ್ಯೂಷನ್‌ಗೆ ನೋಟಿಸ್‌ ಜಾರಿಗೊಳಿಸಿ ಸೆ.23ಕ್ಕೆ ವಿಚಾರಣೆ ಮುಂದೂಡಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 3991 ಪುಟಗಳ ದೋಷಾರೋಪಣ ಪಟ್ಟಿಯನ್ನು ಸೆ. 4ರಂದು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ 18 ದಿನಗಳ ಬಳಿಕ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ದೋಷಾರೋಪಣೆ ಪಟ್ಟಿ ಸಲ್ಲಿಕೆಗೂ ಮೊದಲು ಪವಿತ್ರಾಗೌಡ ಸೇರಿ ಇತರರು ಜಾಮೀನಿಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು.

PREV

Recommended Stories

ಸೈಬರ್‌ ಕ್ರೈಂ ಭೇದಿಸುವುದು ಬಹುದೊಡ್ಡ ಸವಾಲು: ಪರಮೇಶ್ವರ್‌ ಅಸಹಾಯಕತೆ
ಬ್ಯಾಡರಹಳ್ಳಿ ಬಳಿ ವಿದ್ಯುತ್‌ ತಂತಿ ಕಟ್‌: 3 ಉಪ ಕೇಂದ್ರ ವ್ಯಾಪ್ತಿ ಪವರ್‌ ಸ್ಥಗಿತ