ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಅರ್ಜಿ

Published : May 03, 2024, 09:21 AM IST
Prajwal Revanna HD Revanna

ಸಾರಾಂಶ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಗೊಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಶುಕ್ರವಾರ ನಡೆಯಲಿದೆ.

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಗೊಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಶುಕ್ರವಾರ ನಡೆಯಲಿದೆ.

ಗುರುವಾರ ಎಚ್‌.ಡಿ.ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲ ಮೂರ್ತಿ ಡಿ. ನಾಯ್ಕ್, ‘ನಮ್ಮ ಕಕ್ಷಿದಾರರ ವಿರುದ್ಧ ಇರುವ ಎಫ್‌ಐಆರ್‌ನಲ್ಲಿ ಜಾಮೀನು ನೀಡಬಹುದಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್‌ಗೆ ಅತ್ಯಾಚಾರ ಆರೋಪ ಸಲ್ಲಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಅವರು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ. ಕಕ್ಷಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬೇಕು’ ಎಂದು ಕೋರಿದರು.

ವಾದ ಆಲಿಸಿದ ನ್ಯಾಯಾಲಯವು, ಎಫ್‌ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗಲಿದೆ. ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲವೇ ಎಂದು ಪ್ರಶ್ನಿಸಿತು.

ಈ ನಡುವೆ, ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಎಸ್‌ಐಟಿಗೆ ನೊಟೀಸ್‌ ಜಾರಿಗೊಳಿಸಿದ ನ್ಯಾಯಾಲಯವು ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

PREV

Recommended Stories

ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!
ಗ್ರಾಮ ಲೆಕ್ಕಿಗರ ಹುದ್ದೆಗೆ ನಕಲಿ ಅಂಗವಿಕಲ ಪ್ರಮಾಣಪತ್ರ ಸಲ್ಲಿಕೆ...!