ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರಿಗೆ ಪೊಲೀಸ್‌ ಗ್ರಿಲ್‌

ಸಾರಾಂಶ

ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರು  : ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ನಟ ದರ್ಶನ್‌, ಅವರ ಆಪ್ತ ನಾಗರಾಜ, ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್‌ ನಾಗರಾಜ, ಶ್ರೀನಿವಾಸ ಅಲಿಯಾಸ್ ಕುಳ್ಳ ಸೀನ ಹಾಗೂ ಧರ್ಮನನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್ ಅವರ ಸೆಲ್‌ನಲ್ಲಿ ಮೊಬೈಲ್ ಹಾಗೂ ಸಿಗರೇಟ್ ಪತ್ತೆಯಾಗಿಲ್ಲ. ಹೀಗಾಗಿ ಮೊಬೈಲ್ ಸಂಬಂಧ ಗುರುವಾರ ಕೂಡ ಅವರನ್ನು ಮತ್ತೆ ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಜೈಲಿನಲ್ಲಿ ರೌಡಿಗಳ ಜತೆ ಸಿಗರೇಟ್ ಸೇದುತ್ತ ಕುರ್ಚಿಯಲ್ಲಿ ದರ್ಶನ್‌ ಕುಳಿತಿದ್ದ ಪೋಟೋ ವೈರಲ್ ಆಗಿತ್ತು. ಆ ಪೋಟೋ ತೆಗೆದ ಸ್ಥಳವನ್ನು ಪೊಲೀಸರು ಪರಿಶೀಲಿಸಿದ್ದು, ದರ್ಶನ್ ಹಾಗೂ ಅವರೊಂದಿಗೆ ಇದ್ದ ರೌಡಿಗಳನ್ನು ಕರೆದೊಯ್ದು ಮಹಜರ್ ಕೂಡ ನಡೆಸಿದ್ದಾರೆ ಎನ್ನಲಾಗಿದೆ.

Share this article