ಶಿಕ್ಷಕಿ ಹೊಡೆಸಿದ ಬಸ್ಕಿಯಿಂದ 4ನೇ ತರಗತಿ ಬಾಲಕ ಸಾವು

KannadaprabhaNewsNetwork |  
Published : Nov 23, 2023, 01:45 AM IST
ಸಂಗ್ರಹ ಚಿತ್ರ | Kannada Prabha

ಸಾರಾಂಶ

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಕ್ಯಾಪ್ಟನ್‌ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಜಾಜ್‌ಪುರ (ಒಡಿಶಾ): ಶಾಲೆಯಲ್ಲಿ ಶಿಕ್ಷಕಿ ಹೊಡೆಸಿದ ಬಸ್ಕಿಯಿಂದಾಗಿ ವಿದ್ಯಾರ್ಥಿಯೊಬ್ಬ ಅಸ್ವಸ್ಥನಾಗಿ ಮೃತಪಟ್ಟ ಘಟನೆ ಮಂಗಳವಾರ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಒರಾಲಿ ಗ್ರಾಮದಲ್ಲಿದ್ದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರುದ್ರ ನಾರಾಯಣ ಸೇಠಿ ಎಂಬ ಬಾಲಕ ತರಗತಿ ಅವಧಿಯಲ್ಲಿ ಹೊರಗಡೆ ಆಟವಾಡುತ್ತಿದ್ದನ್ನು ಕಂಡ ಶಿಕ್ಷಕಿ ಆತನಿಗೆ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದರು. ಪರಿಣಾಮ ಬಾಲಕ ಮೂರ್ಛೆ ತಪ್ಪಿದ.

ಇದನ್ನು ಕಂಡ ಸ್ಥಳೀಯರು ಆತನ ಪೋಷಕರಿಗೆ ಮಾಹಿತಿ ನೀಡಿ ಆತನನ್ನು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದರು. ಬಳಿಕ ಅಲ್ಲಿಂದ ಕಟಕ್‌ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ.

ಘಟನೆ ಸಂಬಂಧ ಪೊಲೀಸರು ಹಾಗೂ ಬಿಇಓ ಅಧಿಕಾರಿಗಳು ಯಾವುದೇ ಅಧಿಕೃತ ದೂರು ಸ್ವೀಕರಿಸಿಲ್ಲ. ಕಾರಣ ತನಿಖೆ ಆರಂಭಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಒಂದು ವರ್ಷದಲ್ಲಿ ಲಕ್ಷಗಟ್ಟಲೇ ಮೆಟ್ರೋ ನಿಯಮ ಉಲ್ಲಂಘನೆ ಕೇಸ್‌ ದಾಖಲು
ಮೈಸೂರಲ್ಲಿ ಮತ್ತೊಂದು ಹೈಟೆಕ್‌ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ