ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ದಂಡ ₹500 ರಿಂದ ₹10ಸಾವಿರಕ್ಕೆ ಏರಿಕೆ!

KannadaprabhaNewsNetwork | Updated : Feb 01 2024, 12:33 PM IST

ಸಾರಾಂಶ

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದಂಡದ ಮೊತ್ತವನ್ನು ಬರೋಬ್ಬರಿ 20 ಪಟ್ಟು ಹೆಚ್ಚಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ದಂಡದ ಮೊತ್ತವನ್ನು ಬರೋಬ್ಬರಿ 20 ಪಟ್ಟು ಹೆಚ್ಚಿಸಿದೆ. 

ಅಸಭ್ಯ ವರ್ತನೆಗೆ ಈ ಮೊದಲು ₹500 ಇದ್ದ ದಂಡವನ್ನು ₹10,000ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಇದರ ಮಧ್ಯೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಕಳೆದ ತಿಂಗಳು (ಜ.2) ವರದಿಯಾಗಿತ್ತು. 

ಈ ವೇಳೆ ತಪ್ಪಿತಸ್ಥನಿಗೆ ಮೆಟ್ರೋ (ಕಾರ್ಯಾಚರಣೆ ಮತ್ತು ನಿರ್ವಹಣೆ) 2002ರ ಆ್ಯಕ್ಟ್ ಸೆಕ್ಷನ್‌ 59, 60, 64ರ ಅಡಿ ₹10,000 ದಂಡ ವಿಧಿಸಲಾಗಿತ್ತು.

ಕಟ್ಟಡಕ್ಕೆ ವಿದ್ಯುತ್‌ಗೆ ಲಂಚ: ಬೆಸ್ಕಾಂ ಅಧಿಕಾರಿ ಬಲೆಗೆ ಕನ್ನಡಪ್ರಭ ವಾರ್ತೆ ಬೆಂಗಳೂರುಕಟ್ಟಡವೊಂದಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ₹1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಅಧಿಕಾರಿಯೊಬ್ಬ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ವಿಜಯನಗರ ವಿಭಾಗದ ಕಿರಿಯ ಎಂಜಿನಿಯರ್‌ ಪ್ರಕಾಶ್‌ ಬಂಧಿತ ಆರೋಪಿ. ಗುತ್ತಿಗೆದಾರ ಮಂಜೇಶ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸಿದ್ದಾರೆ. 

ವಿಜಯನಗರದಲ್ಲಿನ ರತ್ನಾ ಆ್ಯಂಡ್ ಉಮರಾಣಿ ಎಂಬ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಪೂರೈಕೆ ಮಾಡಲು ಅರ್ಜಿ ಸಲ್ಲಿಸಲಾಗಿತ್ತು. 

ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡಲು ₹2.50 ಲಕ್ಷ ಲಂಚ ನೀಡಲು ಬೇಡಿಕೆ ಇಡಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ.₹2.50 ಲಕ್ಷ ನೀಡದಿದ್ದಾಗ ₹1 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಡಲಾಗಿತ್ತು. 

ಲಂಚ ಪಡೆಯುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಅನ್ವಯ ಕಾನೂನು ಕ್ರಮ ಜರುಗಿಸಲಾಗಿದೆ.

Share this article