ಲೈಂಗಿಕ ದೌರ್ಜನ್ಯ (ಪೊಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ (ಪೊಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ತಮ್ಮ ಮನೆಗೆ ಸಹಾಯ ಕೋರಿ ತಾಯಿ ಜತೆ ಬಂದಿದ್ದಾಗ 17 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪನವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ ಪೊಲೀಸರು, ನ್ಯಾಯಾಲಯಕ್ಕೆ ಯಡಿಯೂರಪ್ಪನವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಮುಂದಾಗಿದ್ದಾರೆ.