ಲೈಂಗಿಕ ದೌರ್ಜನ್ಯ: ಶಿಕ್ಷಕನ ಬಂಧನ

KannadaprabhaNewsNetwork | Published : Oct 14, 2023 1:00 AM

ಸಾರಾಂಶ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಪಾವಗಡ:ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಸಲುಕುಂಟೆ ಸಹ ಶಿಕ್ಷಕ ಪಿ. ನಾಗಭೂಷಣ ಬಂಧಿತ ಶಿಕ್ಷಕ. ಈ ಹಿಂದೆ ಈತ ಮಧುಗಿರಿ ತಾಲೂಕಿನ ಕೊಡಗಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ.ಈ ವಿದ್ಯಾರ್ಥಿನಿಗೆ ಐ ಲವ್ ಯೂ ಎಂದು ಹೇಳಿ ಬಳೆ ತೊಡಿಸಿ ಆಮಿಷವೊಡ್ಡಿ ಬಡವನಹಳ್ಳಿಯಲ್ಲಿ ಬೇರೆ ಕಡೆಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದ ಆರೋಪದ ಮೇಲೆ ಈತನನ್ನು ಅಮಾನತು ಮಾಡಲಾಗಿತ್ತು. ದೂರು ದಾಖಲಾಗದ ಹಿನ್ನೆಲೆಯಲ್ಲಿ ಸಾಸಲುಕುಂಟೆ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು. ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದರೂ ಶಿಕ್ಷಕನ ವಿರುದ್ಧ ಕಾನೂನು ಕ್ರಮ ಆಗದೆ ಗ್ರಾಮದ ಕೆಲವರು ನೊಂದ ಬಾಲಕಿಯ ಪೋಷಕರನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ತಾಯಿ ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ.

Share this article