ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮೈಸೂರಿನ ರೌಡಿಶೀಟರ್ ಮಹಮದ್ ಸಾಹಿಲ್ ಆಲಮ್ ಆಲಿಯಾಸ್ ಚುವ್ವಾ (38) ಕೊಲೆಯಾದ ದುರ್ದೈವಿ. ಈತ ಕಳೆದ ನಾಲ್ಕೈಂದು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ಬೇರೆಡೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಮೈಸೂರು-ಬೆಂಗಳೂರು ಹೆದ್ದಾರಿಯ ಹಳ್ಳಿ ಮನೆ ಹೋಟೆಲ್ ಹಿಂಭಾಗ ಪೊದೆಯಲ್ಲಿ ಮಂಗಳವಾರ ತಡರಾತ್ರಿ ದೇಹ ಎಸೆದು ಹೋಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಮೈಸೂರು ಮತ್ತು ಮಂಡ್ಯ ಭಾಗಗಳಲ್ಲಿ ರಾತ್ರಿ ವೇಳೆ ಈತ ಓಡಾಡಿಕೊಂಡಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈತನ ಜೊತೆಗಿದ್ದವರೇ ಸಂಚು ರೂಪಿಸಿ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಕೊಲೆಯಾದ ಸಾಹಿಲ್ ಚುವ್ವಾ ಮೈಸೂರಿನ ಉದಯಗಿರಿ, ಎನ್.ಆರ್.ಮೊಹಲ್ಲಾ, ಮಂಡಿ ಮೊಹಲ್ಲಾ ಹಾಗೂ ವಿ.ವಿ.ಪುರಂ ಸೇರಿದಂತೆ ತುಮಕೂರಿನಲ್ಲೂ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.