ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿಯಾಗಿ ಪತಿ ಸಾವನ್ನಪ್ಪಿ, ಪತ್ನಿ ಗಾಯಗೊಂಡಿರುವ ಘಟನೆ ಸಮೀಪದ ಗಾಂಧಿನಗರದ ಬಳಿ ನಡೆದಿದೆ.ಕೆ.ಆರ್.ಪೇಟೆ ತಾಲೂಕು ಕರೋಟಿ ಗ್ರಾಮದ ಕೃಷ್ಣೇಗೌಡ (69) ಮೃತ ವ್ಯಕ್ತಿ. ಇವರ ಪತ್ನಿ ಯಶೋಧಮ್ಮ(58) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಂಪತಿಗಳಿಬ್ಬರು ಶನಿವಾರ ರಾತ್ರಿ ಗಾಂಧಿನಗರ ಬಳಿ ರಾಜ್ಯ ಹೆದ್ದಾರಿ ದಾಟುವ ವೇಳೆ ಕೆ.ಆರ್.ಪೇಟೆ ಕಡೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ ಚಾಲಕನ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೃಷ್ಣೇಗೌಡ ಮತ್ತು ಯಶೋಧಮ್ಮ ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣ ಸ್ಥಳೀಯರ ಸಹಕಾರದಿಂದ ಕೆ.ಆರ್.ಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣೇಗೌಡ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಪತ್ನಿ ಯಶೋಧಮ್ಮ ಸ್ಥಿತಿಯೂ ತೀವ್ರ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.
ಘಟನಾ ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಕೃಷ್ಣೇಗೌಡರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು.ಬಿಹಾರ ಮೂಲದ ವ್ಯಕ್ತಿ ಆತ್ಮಹತ್ಯೆ
ಶ್ರೀರಂಗಪಟ್ಟಣ:ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪಾಲಹಳ್ಳಿಯ ಸೌದೆ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಆಕಾಶ್ ಠಾಕೂರ್ (25) ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಆರು ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದ. ಬಿಹಾರದಿಂದ ಕೆಲಸಕ್ಕಾಗಿ ಪಾಲಹಳ್ಳಿ ಬಳಿಯ ಮಹಮದ್ ಸುರೇನ್ ಎಂಬ ಮಾಲೀಕತ್ವದ ಸೌದೆ ಪುಡಿ ಮಾಡುವ ಕಾರ್ಖಾನೆಯಲ್ಲಿ ಕಾರ್ಮಿಕನಾಗಿದ್ದನು. ಹೆಂಡತಿ ಬಿಹಾರದಲ್ಲಿ ವಾಹನವಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಶವವನ್ನು ಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ಮೃತನ ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಶವವನ್ನು ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ಸಾಗಿಸಿ ನಂತರ ಬಿಹಾರಕ್ಕೆ ಕಳಿಸಿಕೊಡುವ ವ್ಯವಸ್ಥೆ ಮಾಡಿದರು.