ದರ್ಶನ್‌ ಬೇಲ್‌ ತಡೆಗೆ ಸುಪ್ರೀಂ ನಕಾರ -ನಟ ಸೇರಿದಂತೆ 7 ಮಂದಿಗೆ ಕೋರ್ಟ್‌ ನೋಟಿಸ್‌ ಜಾರಿ

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್‌ ಜಾರಿ ಮಾಡಿದೆ.

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್‌ ಜಾರಿ ಮಾಡಿದೆ.

ಕೊಲೆ ಪ್ರಕರಣ ಸಂಬಂಧ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ್ಯಾ.ಪರ್ದೀವಾಲ‌ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಶುಕ್ರವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು.

 ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ, ಹೈಕೋರ್ಟ್ ನಮ್ಮ ವಾದವನ್ನು ಸರಿಯಾಗಿ ಆಲಿಸಿಲ್ಲ. ಇದೊಂದು ಅಮಾನವೀಯ ಕೃತ್ಯ. ಹೀಗಾಗಿ, ಜಾಮೀನು ರದ್ದುಗೊಳಿಸಿ ಎಂದು ಆಗ್ರಹಿಸಿದರು. ದರ್ಶನ್‌ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಹೈಕೋರ್ಟ್‌ ಮೆರಿಟ್‌ ಆಧಾರದ ಮೇಲೆಯೇ ಜಾಮೀನು ನೀಡಿದೆ ಎಂದರು. ವಾದ ಆಲಿಸಿದ ನ್ಯಾಯಪೀಠ, ದರ್ಶನ್‌ ಸೇರಿ 7 ಮಂದಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

Share this article