ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬಿಗ ಮುರಿದು ಕಳವು : ಆರೋಪಿಯ ಬಂಧನ

KannadaprabhaNewsNetwork |  
Published : Oct 08, 2024, 01:08 AM ISTUpdated : Oct 08, 2024, 04:00 AM IST
Murder accused arrested in Jharkhand

ಸಾರಾಂಶ

ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳನನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು :  ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ ಖತರ್ನಾಕ್‌ ಕಳ್ಳನನ್ನು ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಿಗಳರಪೇಟೆ ನಿವಾಸಿ ಮಂಜುನಾಥ ಅಲಿಯಾಸ್‌ ಪರಿವಾಳ ಮಂಜ(38) ಬಂಧಿತ. ಆರೋಪಿಯಿಂದ 30 ಲಕ್ಷ ರು.ಮೌಲ್ಯದ 475 ಗ್ರಾಂ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಜಪ್ತಿ ಮಾಡಲಾಗಿದೆ. ಕಳೆದ ಏ.5ರಂದು ಚಿಕ್ಕಪೇಟೆ ನಿವಾಸಿ ಉಪೇಶ್‌ ಭಂಡಾರಿ ಎಂಬುವವರ ಮನೆಯ ಬೀಗ ಮುರಿದು ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ವೃತ್ತಿಪರ ಕಳ್ಳ:

ಆರೋಪಿ ಮಂಜುನಾಥ ವೃತ್ತಿಪರ ಕಳ್ಳನಾಗಿದ್ದು, ಹಲವು ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಈತನ ವಿರುದ್ಧ ಈ ಹಿಂದೆ ಚಿಕ್ಕಪೇಟೆ, ಹಲಸೂರು ಗೇಟ್‌, ಎಸ್‌.ಜೆ.ಪಾರ್ಕ್‌, ಬನಶಂಕರಿ, ಶಂಕರಪುರ, ವಿದ್ಯಾರಣ್ಯಪುರ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸುಮಾರು 30ಕ್ಕೂ ಅಧಿಕ ಮನೆಗಳವು ಪ್ರಕರಣಗಳು ದಾಖಲಾಗಿವೆ. ಹಲವು ಬಾರಿ ಬಂಧನಕ್ಕೆ ಒಳಗಾಗಿದ್ದರೂ ಜಾಮೀನು ಪಡೆದು ಹೊರಗೆ ಬಂದು ಬಳಿಕ ಮತ್ತೆ ತನ್ನ ಕಳವು ಚಾಳಿ ಮುಂದುವರೆಸುತ್ತಿದ್ದ.

ರಾತ್ರಿ ವೇಳೆ ಕನ್ನ:

ಆರೋಪಿಯು ಆರಂಭದಲ್ಲಿ ಕಟ್ಟಡಗಳ ಮೇಲೆ ನಿಂತು ಪರಿವಾಳ ಹಾರಿಸುತ್ತಿದ್ದ. ಬಳಿಕ ಪರಿವಾಳ ಹಿಡಿದುಕೊಳ್ಳುವ ನೆಪದಲ್ಲಿ ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ. ಹೀಗಾಗ ನಗರದ ಅಪರಾಧ ಜಗತ್ತಿನಲ್ಲಿ ಈತನನ್ನು ಪರಿವಾಳ ಮಂಜ ಎಂದೂ ಕರೆಯಲಾಗುತ್ತದೆ. ಇತ್ತೀಚೆಗೆ ಹಗಲಿನಲ್ಲಿ ನಗರದ ವಿವಿಧೆಡೆ ಸುತ್ತಾಡಿ ಬೀಗ ಹಾಕಿದ ಮನೆಗಳನ್ನು ಗುರುತಿಸಿಕೊಂಡು ರಾತ್ರಿ ವೇಳೆ ಬೀಗ ಮುರಿದು ಕಳವು ಮಾಡುತ್ತಿದ್ದ. ಕದ್ದ ಮಾಲುಗಳನ್ನು ವಿವಿಧ ಜ್ಯುವೆಲರಿ ಅಂಗಡಿಗಳಲ್ಲಿ ವಿಲೇವಾರಿ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದ. ಹಣ ಖಾಲಿಯಾದ ಬಳಿಕ ಮತ್ತೆ ತನ್ನ ಮನೆಗಳವು ಮಾಡಿ ತಲೆಮರೆಸಿಕೊಂಡು ಓಡಾಡುತ್ತಿದ್ದ.

ನೆರೆರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ:

5 ತಿಂಗಳ ಹಿಂದೆಯಷ್ಟೇ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ ಮಂಜುನಾಥ ನಗರದ ವಿವಿಧೆಡೆ ಮನೆಗಳವು ಮಾಡಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ. ಈತನ ಬಂಧನದಿಂದ ಸಿಟಿ ಮಾರ್ಕೆಟ್‌ ಪೊಲೀಸ್‌ ಠಾಣೆಯ ಮೂರು ಹಾಗೂ ಹಲಸೂರು ಗೇಟ್‌ ಠಾಣೆಯ ಒಂದು ಸೇರಿದಂತೆ ಒಟ್ಟು ನಾಲ್ಕು ಮನೆಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಹಣಕ್ಕಾಗಿ ಪರಿಚಿತನನ್ನೇ ಕಿಡ್ನಾಪ್‌ ಮಾಡಿದ್ದ ನಾಲ್ವರ ಬಂಧನ
ಧರ್ಮರಾಯಸ್ವಾಮಿ ದೇಗುಲದ ನೆಕ್ಲೆಸ್‌ ಕಳವು