ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಮಳವಳ್ಳಿ ಉಪ ವಿಭಾಗಗಳಿಂದ ಒಟ್ಟಾರೆ ೩೯ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ೧.೪೮೪ ಕೆ.ಜಿ. ಚಿನ್ನಾಭರಣ, ೯೫೦ ಗ್ರಾಂ ಬೆಳ್ಳಿ, ೨೬ ದ್ವಿಚಕ್ರ ವಾಹನಗಳು ಹಾಗೂ ೩೦ ಸಾವಿರ ರು. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕಾರು, ೨೫೧ ಗ್ರಾಂ ತೂಕದ ಚಿನ್ನಾಭರಣ, ೭೯ ಗ್ರಾಂ ತೂಕದ ಚಿನ್ನದ ಗಟ್ಟಿ ಸೇರಿ ಒಟ್ಟು ೩೩೦ ಗ್ರಾಂ ಚಿನ್ನ, ನಗರದ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೯೫೦ ಗ್ರಾಂ ತೂಕದ ಬೆಳ್ಳಿ ಪದಾರ್ಥಗಳು, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದರು.ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯ ೧.೦೫ ಗ್ರಾಂ ತೂಕದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ, ಮದ್ದೂರು ಪೊಲೀಸ್ ಠಾಣೆಯ ಪ್ರಕರಣದಲ್ಲಿ ೫೦ ಗ್ರಾಂ ಚಿನ್ನದ ಮಾಂಗಲ್ಯ ಸರ, ೩೨ ಗ್ರಾಂ ಚಿನ್ನದ ಸರ ಸೇರಿದಂತೆ ೮೨ ಗ್ರಾಂ ಚಿನ್ನಾಭರಣ, ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೧೧.೨ ಗ್ರಾಂ ಚಿನ್ನದ ಸರ, ೨ ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬೆಸಗರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು ೪ ಪ್ರಕರಣಗಳಲ್ಲಿ ೧೫೬.೩೬ ಗ್ರಾಂ ತೂಕದ ಚಿನ್ನಾಭರಣ, ೩೦ ಸಾವಿರ ನಗದು, ೨ ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.
ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೨೦೦ ಗ್ರಾಂ ಚಿನ್ನಾಭರಣ ಹಾಗೂ ೬ ಬೈಕ್‌ಗಳನ್ನು ವಶಪಕ್ಕೆ ಪಡೆಯಲಾಗಿದೆ ಎಂದರು. ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಇ.ತಿಮ್ಮಯ್ಯ, ಎಸ್.ಇ.ಗಂಗಾಧರಸ್ವಾಮಿ, ಡಿವೈಎಸ್ಪಿ ಚಲುವರಾಜು, ಕೃಷ್ಣಕುಮಾರ್, ಯಶ್ವಂತ್‌ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಗೋಷ್ಠಿಯಲ್ಲಿ ಇದ್ದರು.
ನಾಗಮಂಗಲ ಟೌನ್ ಪೊಲೀಸ್ ಠಾಣೆಯ ೨ ಪ್ರಕರಣಗಳಲ್ಲಿ ೭೪೩.೯೧೪ ಗ್ರಾಂ ತೂಕದ ಚಿನ್ನದ ಒಡವೆಗಳು ೨ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ೧.೦೬ ಕೋಟಿ ರು. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ. ಶೋಭಾರಾಣಿ ಮಾಹಿತಿ ನೀಡಿದರು.