ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ರೈತ ಸಾವು

KannadaprabhaNewsNetwork | Published : Jun 6, 2024 12:31 AM

ಸಾರಾಂಶ

ನುಗ್ಗಹಳ್ಳಿ ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ರೈತ ಮಹದೇವು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶದಿಂದ ರೈತ ಸಾವನ್ನಪ್ಪಿರುವ ಘಟನೆ ತಾಲೂಕಿನ ನುಗ್ಗಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಮಹದೇವು (52) ಮೃತ ರೈತ. ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ರೈತ ಮಹದೇವು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಸಿದ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನೀಡಿದ್ದಾರೆ.

ಸಿಎಸ್‌ಪಿ ಭೇಟಿ: ವಿಷಯ ತಿಳಿದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿ ಸೆಸ್ಕ್ ಇಲಾಖೆಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರು.ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ಸೆಸ್ಕ್ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿಯೇ 2 ಲಕ್ಷ ರು.ಪರಿಹಾರದ ಚೆಕ್ ವಿತರಣೆ ಮಾಡಿದರು. ಉಳಿಕೆ ಪರಿಹಾರದ ಹಣವನ್ನು ಸೆಸ್ಕ್ ಇಲಾಖೆಯಿಂದ ಬರಿಸಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ರೈತರು ಜಮೀನುಗಳಿಗೆ ಹೋದ ವೇಳೆ ಈ ರೀತಿಯ ಆಕಸ್ಮಿಕ ಘಟನೆಗಳು ನಡೆಯುತ್ತಿದೆ. ಇಂತಹ ಅನಾಹುತಗಳು ನಡೆದಾಗ ಸರ್ಕಾರ ಹಾಗೂ ಇಲಾಖೆಗಳು ರೈತರ ನೆರವಿಗೆ ಧಾವಿಸಬೇಕು, ಕನಿಷ್ಠ 5 ರಿಂದ 10 ರು. ಪಕ್ಷ ಪರಿಹಾರ ನೀಡಬೇಕು. ಸೆಸ್ಕ್ ಇಲಾಖೆಯವರು ತಕ್ಷಣ 2 ಲಕ್ಷ ರು. ಪರಿಹಾರ ನೀಡಿದ್ದಾರೆ. ಉಳಿಕ ಪರಿಹಾರವನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಶವಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೌಟುಂಬಿಕ ಕಲಹ: ದಂಪತಿ ಪ್ರತ್ಯೇಕ ನೇಣುಬಿಗಿದು ಆತ್ಮಹತ್ಯೆ

ಶ್ರೀರಂಗಪಟ್ಟಣ:ಕೌಟುಂಬಿಕ ಕಲಹದಿಂದಾಗಿ ದಂಪತಿ ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪ್ರಭಾವತಿ (40) ಮಂಗಳವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಪತಿ ದಿಲೀಪ್ (45) ಗ್ರಾಮದ ಹೊರವಲಯದ ಜಮೀನಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ. ಮೃತ ದಂಪತಿಗೆ 13 ವರ್ಷದ ಮಗನಿದ್ದು, ಸುತ್ತೂರು ಮಠದಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಘಟನೆಗೆ ಕೌಟುಂಬಿಕ ಜಗಳವೇ ಕಾರಣ ಎನ್ನಲಾಗಿದೆ. ಈ ಸಂಬಂಧ ಪಟ್ಟಣ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share this article