ಕಾರಿಗೆ ಸಾರಿಗೆ ಸಂಸ್ಥೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ : ಐವರಿಗೆ ತೀವ್ರ ಗಾಯ

KannadaprabhaNewsNetwork |  
Published : Nov 14, 2024, 12:52 AM ISTUpdated : Nov 14, 2024, 04:23 AM IST
13ಕೆಎಂಎನ್ ಡಿ19 | Kannada Prabha

ಸಾರಾಂಶ

ಕೇರಳ   ಕಣ್ಣೂರು ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  

 ಮದ್ದೂರು : ಕಾರಿಗೆ ಸಾರಿಗೆ ಸಂಸ್ಥೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕೇರಳ ಮೂಲದ ಐವರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ನಿಡಘಟ್ಟ ಗ್ರಾಮದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದೆ.

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿರುವ ಹಲವರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳೆಲ್ಲರೂ ಕೇರಳದ ಕಣ್ಣೂರಿನಿಂದ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರು. ನಿಡಘಟ್ಟ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆ ಬಸ್‌ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕಣರ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕಾರು ಟೈರ್ ಸಿಡಿದು ಓರ್ವ ಸಾವು, ಮೂವರಿಗೆ ಗಾಯ

ಕುಣಿಗಲ್: ಕಾರು ಟೈರ್ ಸಿಡಿದು ಓರ್ವ ಸಾವನ್ನಪ್ಪಿದ್ದು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ರಾಜೇಂದ್ರಪುರ ಗೇಟ್ ಬಳಿ ನಡೆದ ಘಟನೆ. ಮಂಡ್ಯ ಮೂಲದ ಆಕರ್ಷ (28) ಕಾರು ಮರಕ್ಕೆ ಗುದ್ದಿದ ರಭಸಕ್ಕೆ ಮೃತಪಟ್ಟಿದ್ದಾನೆ. ಶಶಾಂಕ್ ಜ್ಞಾನೇಶ್ವರಿ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಮಂಡ್ಯ ಮೂಲದ ನಾಲ್ವರು, ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ವಾಪಸ್ ತೆರಳುವಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌