)
ಕನ್ನಡಪ್ರಭ ವಾರ್ತೆ ಬೆಂಗಳೂರು
ದೆಹಲಿ ಮೂಲದ ಜಯಚಂದ್ ಹಾಗೂ ತರುಣ್ ಬಂಧಿತರಾಗಿದ್ದು, ಆರೋಪಿಗಳಿಂದ 9 ಲಕ್ಷ ರು. ಮೌಲ್ಯದ 14 ಐಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ದೇವನಹಳ್ಳಿ ಸಮೀಪದ ಚನ್ನರಾಯಪಟ್ಟಣ ಸಮೀಪ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೀಕ್ಷಕರ ಬಳಿ ಮೊಬೈಲ್ ಕಳ್ಳತನವಾಗಿತ್ತು. ಈ ಬಗ್ಗೆ ವೈಟ್‌ಫೀಲ್ಡ್ ಠಾಣೆಗೆ ಮಹದೇವಪುರದ ನಿವಾಸಿ ನೀಡಿದ ದೂರಿನ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೃತ್ಯದ ನಡೆದ ಕೆಲವೇ ತಾಸುಗಳಲ್ಲಿ ಆರೋಪಿಗಳು ಪೊಲೀಸರು ಸೆರೆ ಹಿಡಿದಿದ್ದಾರೆ.
ನಗರದಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳ ಬಗ್ಗೆ ಆನ್‌ಲೈನ್ ಮೂಲಕ ದೆಹಲಿ ಮೂಲದ ಚಂದ್ ಹಾಗೂ ತರುಣ್ ಮಾಹಿತಿ ಪಡೆಯುತ್ತಿದ್ದರು. ಬಳಿಕ ಆ ಕಾರ್ಯಕ್ರಮಗಳಿಗೆ ವೀಕ್ಷಕರ ಸೋಗಿನಲ್ಲಿ ಭಾಗವಹಿಸಿ ಆರೋಪಿಗಳು ಕೈ ಚಳಕ ತೋರಿಸುತ್ತಿದ್ದರು.ಅಂತೆಯೇ ಜ.23 ರಂದು ಚನ್ನರಾಯಪಟ್ಟಣದಲ್ಲಿ ನಡೆದ ಸಂಗೀತ ಸಂಜೆ ಸಮಾರಂಭಕ್ಕೆ ಪಾಲ್ಗೊಳ್ಳಲು ದೆಹಲಿಯಿಂದ ಚಂದನ್ ಹಾಗೂ ತರುಣ್ ಬಂದಿದ್ದರು. ವೈಟ್ ಫೀಲ್ಡ್ ಸಮೀಪ ಅವರು ರೂಮ್ ಬಾಡಿಗೆ ಪಡೆದಿದ್ದರು. ಆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಹದೇವಪುರದ ನಿವಾಸಿ ಐ ಫೋನ್ ಮೊಬೈಲ್ ಅನ್ನು ಆರೋಪಿಗಳು ಎಗರಿಸಿದ್ದರು. ಈ ಬಗ್ಗೆ ದೂರು ದಾಖಲಾದ ಕೂಡಲೇ ಟವರ್ ಲೋಕೇಷನ್ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.