8 ವರ್ಷದಿಂದ ನಾಪತ್ತೆ ಆಗಿದ್ದ ಇಬ್ಬರು ರೌಡಿ ಶೀಟರ್‌ ಬಂಧನ

KannadaprabhaNewsNetwork |  
Published : Apr 13, 2024, 01:48 AM ISTUpdated : Apr 13, 2024, 04:49 AM IST
ಕ್ರೈಂ... | Kannada Prabha

ಸಾರಾಂಶ

ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿ ಆಗಿ ಕೋರ್ಟ್‌ಗೆ ಹಾಜರಾಗದೆ 8 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 ಬೆಂಗಳೂರು :  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿ ಶೀಟರ್‌ಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊಸಕೆರೆಹಳ್ಳಿಯ ರೋಹಿತ್‌ ಅಲಿಯಾಸ್ ರಘು(25) ಮತ್ತು ಬನಶಂಕರಿಯ ಮೋಹನ್‌(35) ಬಂಧಿತರು. ಈ ಇಬ್ಬರೂ ಆರೋಪಿಗಳು ಬಸವನಗುಡಿ ಪೊಲೀಸ್‌ ಠಾಣೆಯ ರೌಡಿ ಶೀಟರ್‌ಗಳು.

ಆರೋಪಿ ರೋಹಿತ್‌ 2016ನೇ ಸಾಲಿನಿಂದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಬಸವನಗುಡಿ, ಹನುಮಂತನಗರ, ಸಿದ್ದಾಪುರ, ವಿವಿ ಪುರ, ಬೆಳ್ಳಂದೂರು, ಎಸ್‌ಜಿ ಪಾಳ್ಯ, ಜೆ.ಪಿ.ನಗರ, ಚೆನ್ನಮ್ಮನಕೆರೆ ಅಚ್ಚುಕಟ್ಟು ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕಳವು, ದರೋಡೆಗೆ ಯತ್ನ ಸೇರಿದಂತೆ 15 ಅಪರಾಧ ಪ್ರಕರಣಗಳು ದಾಖಲಾಗಿವೆ

ಈ ಹಿಂದೆ ಕೆಲ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿಯು ಜಾಮೀನು ಪಡೆದು ಹೊರಗೆ ಬಂದು ಕಳೆದ 8 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಬಂಧನಕ್ಕೆ ವಾರೆಂಟ್‌ ಹೊರಡಿಸಿತ್ತು. ಇದರ ಬೆನ್ನಲ್ಲೇ ಬಸನವಗುಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮತ್ತೊಬ್ಬ ರೌಡಿ ಶೀಟರ್‌ ಸೆರೆ

ಮತ್ತೊಂದು ಪ್ರಕರಣದಲ್ಲಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಮೋಹನ್‌ನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ 2012ನೇ ಸಾಲಿನಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಈತನ ವಿರುದ್ಧ ಈ ಹಿಂದೆ ಬೆಂಗಳೂರು ನಗರ ಮತ್ತು ತಮಿಳುನಾಡು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ಆರೋಪಿಯು ಜಾಮೀನು ಪಡೆದು ಹೊರಗೆ ಬಂದು ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ವಾರೆಂಟ್‌ ಜಾರಿದ ಮಾಡಿದ ಹಿನ್ನೆಲೆಯಲ್ಲಿ ಬಸವನಗುಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!