ಮದ್ದೂರು: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ನಿಡಘಟ ಮತ್ತು ತಿಪ್ಪೂರು ನಡುವೆ ಶುಕ್ರವಾರ ರಾತ್ರಿ ಜರುಗಿದೆ.
ಮಳವಳ್ಳಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ವಿಶೇಷ ಪೋಕ್ಸೋ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿ, ನೊಂದ ಬಾಲಕಿಗೆ ಒಂದು ಲಕ್ಷ ರು. ಪರಿಹಾರ ನೀಡಲು ಅದೇಶಿಸಿದೆ.
ತಾಲೂಕಿನ ತಳಗವಾದಿ ಗ್ರಾಮದ ಈರಯ್ಯರ ಪುತ್ರ ಸಾಮಂದಯ್ಯ (56) ಶಿಕ್ಷೆಗೊಳಗಾದವ. ಅಪ್ರಾಪ್ತೆನ್ನು ತಿಂಡಿ ಕೊಡಿಸುವುದಾಗಿ ಹೇಳಿ ಮನೆಯೊಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸೆಗಿರುವ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು.ಸಬ್‌ಇನ್ಸ್ ಪೆಕ್ಟರ್ ಶ್ರವಣ್ ಎಸ್ ದಾಸರೆಡ್ಡಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದರು. ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ವಿಚಾರಣೆ ನಡೆಸಿ ಅಪರಾಧಿ ಎಂದು ತೀರ್ಪು ಪ್ರಕಟಿಸಿ ಶಿಕ್ಷೆ ಪ್ರಕಟಿಸಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ವಾದ ಮಂಡಿಸಿದ್ದರು.