ವಾಲ್ಮೀಕಿ ನಿಗಮದ ಬಹುಕೋಟಿ ಅಕ್ರಮ - ನಾಗೇಂದ್ರ ಈಗ ಕೈದಿ ನಂ. 7140 - 14 ದಿನ ನ್ಯಾಯಾಂಗ ವಶ

Published : Jul 23, 2024, 10:53 AM IST
MLA Nagendra

ಸಾರಾಂಶ

ನಾಗೇಂದ್ರ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಅವರಿಗೆ ಕೈದಿ ಸಂಖ್ಯೆ 7140 ನೀಡಲಾಗಿದೆ.

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಂಗ ವಶಕ್ಕೆ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. ಈ ವೇಳೆ ವಿಚಾರಣಾಧೀನ ಕೈದಿ ಸಂಖ್ಯೆ 7140 ಅನ್ನು ಅವರಿಗೆ ನೀಡಲಾಗಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ.

ಸೋಮವಾರ ತಮ್ಮ ವಶದಲ್ಲಿರುವ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿ ಗಳು ನಾಗೇಂದ್ರರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಇಡಿ ಅಧಿಕಾರಿಗಳು ಮತ್ತೆ ತಮ್ಮ ವಶಕ್ಕೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿ ದಂತೆ ಸುಧೀರ್ಘ ವಿಚಾರಣೆ ನಡೆಸಿದ ಇಡಿ ಅಧಿ ಕಾರಿಗಳು ಜು.12ರಂದು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರ ಅವರನ್ನು ಜು.18ರ ವರೆಗೆ ಇಡಿ ವಶಕ್ಕೆ ನೀಡಲಾಗಿತ್ತು. ನಂತರ ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜು.22ರ ವರೆಗೆ ಇಡಿ ವಶದ ಅವಧಿಯನ್ನು ವಿಸ್ತರಿಸಲಾಯಿತು. ಇದೀಗ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಈ ನಡುವೆ, ನ್ಯಾಯಾಂಗ ಬಂಧ ನದಲ್ಲಿರುವ ಪ್ರಕರಣದ ಮತ್ತೊಬ್ಬ ಆರೋಪಿ ಹೈದರಾಬಾದ್‌ನ ಸತ್ಯನಾರಾಯಣ ವರ್ಮ ಅವರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಇಡಿ ನ್ಯಾಯಾಲಯಕ್ಕೆ ಮನವಿ ಮಾಡಿತು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಒಂದು ದಿನದ ಮಟ್ಟಿಗೆ ಇಡಿ ವಶಕ್ಕೆ ನೀಡಲಾಯಿತು. ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಲಾಯಿತು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಗರ್ಭಿಣಿ ಜೊತೆ ಪುತ್ರನ ಅನೈತಿಕ ಸಂಬಂಧ- ಸಾಮಾಜಿಕ ಬಹಿಷ್ಕಾರಕ್ಕೆ ನೊಂದ ಮಹಿಳೆ ಆತ್ಮ*ತ್ಯೆ
ಆಕ್ಟಿವೇ ಮಾಡದ ಹೊಸ ಕ್ರೆಡಿಟ್ ಕಾರ್ಡ್‌ ಬಳಸಿ 1.08 ಲಕ್ಷ ರು. ದೋಚಿದ ಸೈಬರ್ ಖದೀಮರು