ಪ್ರಜ್ವಲ್‌ ರೇವಣ್ಣ ವಿರುದ್ಧ ಜಡ್ಜ್‌ ಮುಂದೆ ಸಂತ್ರಸ್ತೆ ಹೇಳಿಕೆ

ಸಾರಾಂಶ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸಂತ್ರಸ್ತೆಯಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು :  ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸಂತ್ರಸ್ತೆಯಿಂದ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಎಸ್‌ಐಟಿಗೆ ಸಂತ್ರಸ್ತೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಐಟಿ ಅಧಿಕಾರಿಗಳು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಸಿಆರ್‌ಪಿಸಿ 164ರಡಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದು ಪ್ರಜ್ವಲ್ ಅವರಿಗೆ ಮತ್ತಷ್ಟು ಸಂಕಷ್ಟ ತಂದಿದೆ ಎಂದು ಮೂಲಗಳು ಹೇಳಿವೆ.

ತನ್ನ ಮೇಲೆ ನಡೆದಿರುವ ಲೈಂಗಿಕ ಶೋಷಣೆ ಬಗ್ಗೆ ನ್ಯಾಯಾಧೀಶರ ಮುಂದೆ ಸವಿಸ್ತಾರವಾಗಿ ಸಂತ್ರಸ್ತೆ ಹೇಳಿದ್ದಾರೆ ಎನ್ನಲಾಗಿದೆ. ಈ ಹೇಳಿಕೆ ಆಧರಿಸಿ ಪ್ರಜ್ವಲ್ ಬಂಧನಕ್ಕೆ ಎಸ್‌ಐಟಿ ಸಿದ್ಧತೆ ನಡೆಸಿದೆ ಎಂದು ತಿಳಿದು ಬಂದಿದೆ.

Share this article