ಎಚ್‌ಎಸ್ಆರ್‌ ಲೇಔಟಲ್ಲಿ ಯುವತಿ ನಗ್ನವಾಗಿ ಓಡಾಡುವ ವಿಡಿಯೋ ವೈರಲ್‌

KannadaprabhaNewsNetwork |  
Published : May 04, 2025, 01:33 AM ISTUpdated : May 04, 2025, 05:38 AM IST
ಸಾಂದರ್ಭಿಕ ಚಿತ್ರ | Kannada Prabha

ಸಾರಾಂಶ

ಯುವತಿಯೊಬ್ಬಳು ಹಾಡಹಗಲೇ ರಸ್ತೆಯಲ್ಲಿ ನಗ್ನವಾಗಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

 ಬೆಂಗಳೂರು : ಯುವತಿಯೊಬ್ಬಳು ಹಾಡಹಗಲೇ ರಸ್ತೆಯಲ್ಲಿ ನಗ್ನವಾಗಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕೆಲ ತಿಂಗಳ ಹಿಂದೆ ಎಚ್‌ಎಸ್‌ಆರ್‌ ಲೇಔಟ್‌ನ ಅಗರ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೇಯಿಂಗ್‌ ಗೆಸ್ಟ್‌(ಪಿಜಿ)ನಲ್ಲಿ ತಂಗಿರುವ ಯುವತಿಯ ಈ ವರ್ತನೆ ಸ್ಥಳೀಯ ನಿವಾಸಿಗಳನ್ನು ಮುಜುಗರಕ್ಕೀಡು ಮಾಡಿದೆ. ಈ ಬಗ್ಗೆ ಪ್ರಶ್ನೆ ಮಾಡಿದ ಸ್ಥಳೀಯ ನಿವಾಸಿಗಳೊಂದಿಗೆ ಯುವತಿ ಅಸಭ್ಯವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ. 

ಈ ಭಾಗದಲ್ಲಿ ಪಿಜಿಗಳು ಹೆಚ್ಚಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯುವಕ-ಯುವತಿಯರ ವರ್ತನೆಗಳು ಮಿತಿ ಮೀರಿವೆ. ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಗಳಲ್ಲಿ ಓಡಾಡಲು ತೊಂದರೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ದೂರು ನೀಡಿದರೂ ಕ್ರಮವಿಲ್ಲ:

ಎಚ್‌ಎಸ್‌ಆರ್‌ ಬಡಾವಣೆಯ ಅಗರ ಲೇಔಟ್‌ನಲ್ಲಿ ಸಾಕಷ್ಟು ಪಿಜಿಗಳಿವೆ. ಆರೇಳು ಅಂತಸ್ತಿನ ಕಟ್ಟಡಗಳನ್ನು ನಿರ್ಮಿಸಿ, ಅದರೊಳಗೆ ಸಣ್ಣ ರೂಮ್‌ಗಳನ್ನು ಪಿಜಿಗಳಾಗಿ ಪರಿವರ್ತಿಸಲಾಗಿದೆ. ಹಣದಾಸೆಗೆ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ಮಾಲೀಕರು ಪಿಜಿಗಳನ್ನು ನಡೆಸುತ್ತಿದ್ದಾರೆ. ಹಗಲು-ರಾತ್ರಿ ಎನ್ನದೇ ಯುವಕ-ಯುವತಿಯರು ರಸ್ತೆಗಳಲ್ಲಿ ಓಡಾಡುತ್ತಾರೆ. ಸಾರ್ವಜನಿಕರ ಎದುರೇ ಅಸಭ್ಯವಾಗಿ ವರ್ತಿಸುತ್ತಾರೆ. ಈ ಬಗ್ಗೆ ಪೊಲೀಸರು, ಬಿಬಿಎಂಪಿ ಸೇರಿ ಸಂಬಂಧಿಸಿದವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಸಭ್ಯ ವರ್ತನೆ:

ಯುವಕ-ಯುವತಿಯರು ರಾತ್ರಿ ವೇಳೆ ಪಿಜಿಗಳಲ್ಲಿ ಪಾರ್ಟಿಗಳನ್ನು ಮಾಡುತ್ತಾರೆ. ಅಮಲಿನಲ್ಲಿ ರಸ್ತೆಗಳಿಗೆ ಬಂದು ಮುಜುಗರವಾಗುವಂತೆ ವರ್ತಿಸುತ್ತಾರೆ. ಕಟ್ಟಡಗಳಿಂದ ಕಟ್ಟಡಕ್ಕೆ ಜಿಗಿಯುತ್ತಾರೆ. ಮಹಿಳೆಯರು, ಹುಡುಗಿಯರು ಮಲಗಿರುವ ರೂಮ್‌ಗಳ ಕಿಟಿಕಿ ಬಳಿ ಬಂದು ಇಣುಕಿ ನೋಡುತ್ತಾರೆ. ಅಮಲಿನಲ್ಲಿ ಜೋರಾಗಿ ಕಿರುಚುವುದು, ಗಲಾಟೆ ಮಾಡುತ್ತಾರೆ. ಈ ಬಗ್ಗೆ ಪ್ರಶ್ನಿಸಿದರೆ, ಸ್ಥಳೀಯರ ಜೊತೆ ಜಗಳಕ್ಕೆ ಬರುತ್ತಾರೆ. ಈ ಪಿಜಿಗಳಿಂದ ಸ್ಥಳೀಯ ನಿವಾಸಿಗಳಿಗೆ ನೆಮ್ಮದಿ ಇಲ್ಲದಂತಾಗಿದೆ. ಕೂಡಲೇ ಪೊಲೀಸರು ಅಕ್ರಮ ಪಿಜಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಪಘಾತ: ಗಾಯಾಳು ಬೈಕ್‌ ಸವಾರ ಸಾವು
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಬೈಕ್ ಸವಾರ ಸಾವು; ಇಬ್ಬರಿಗೆ ಗಾಯ