ಕಾವೇರಿ ನದಿಗೆ ಹಾರಿ ಆತ್ಮಹತ್ಯೆ : ಯುವತಿ ಮೃತದೇಹ ಪತ್ತೆ

KannadaprabhaNewsNetwork |  
Published : Jul 13, 2025, 01:18 AM ISTUpdated : Jul 13, 2025, 08:39 AM IST
12ಕೆಎಂಎನ್ ಡಿ35 | Kannada Prabha

ಸಾರಾಂಶ

ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ದಕ್ಷಿಣ ಕಾವೇರಿ ನದಿ ಸೇತುವೆ ಮೇಲಿಂದ ಮಂಗಳವಾರ ತಡರಾತ್ರಿ ಹಾರಿ ಹಾಸನ ಜಿಲ್ಲೆಯ ಯುವತಿ ಸಿಂಚನ ಆತ್ಮಹತ್ಯೆ ಮಾಡಿಕೊಂಡಿದ್ದರು. ಶನಿವಾರ ಮೃತದೇಹ ಪತ್ತೆಯಾಗಿದೆ.

ಶ್ರೀರಂಗಪಟ್ಟಣ:  ಕಾವೇರಿ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ ಸಿಂಚನ ಮೃತ ದೇಹ ಶನಿವಾರ ಪತ್ತೆಯಾಯಿತು.

ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ದಕ್ಷಿಣ ಕಾವೇರಿ ನದಿ ಸೇತುವೆ ಮೇಲಿಂದ ಮಂಗಳವಾರ ತಡರಾತ್ರಿ ಹಾರಿ ಯುವತಿ ಸಿಂಚನ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೂರು ದಿನಗಳ ಬಳಿಕ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ನದಿಯಲ್ಲಿ ನೀರು ಕಡಿಮೆಯಾಗಿದ್ದು, ಮೀನುಗಾರರ ಬಲೆಗೆ ಮೃತ ದೇಹ ಸಿಕ್ಕಿದೆ. ನದಿಯಲ್ಲಿದ್ದ ಮೃತ ದೇಹವವನ್ನು ಹೊರತೆಗೆದ ಅಗ್ನಿಶಾಮಕ ಸಿಬ್ಬಂದಿ, ಮೃತ ದೇಹದ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಅಪ್ರಾಪ್ತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಮಳವಳ್ಳಿ : ಅಪ್ರಾಪ್ತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಉತ್ತರ ಪ್ರದೇಶ ಮೂಲದ ಪ್ರವೀಣ್ (29) ಬಂಧಿತ ಆರೋಪಿ. ಈತನ ವಿರುದ್ಧ ಬಿಎನ್‌ಎಸ್ ಹಾಗೂ ಪೋಕ್ಸೊ ಕಾಯ್ದೆಯಡಿ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

ಜಿಲ್ಲೆಯ ಗ್ರಾಮವೊಂದರಲ್ಲಿ ಬಿಹಾರ ಮೂಲದ ದಂಪತಿ ಕಳೆದ ಒಂದೂವರೆ ವರ್ಷದಿಂದ ಫ್ಲೆಂವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಫ್ಯಾಕ್ಟರಿಯಲ್ಲೇ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್, ಶನಿವಾರ ಮಧ್ಯಾಹ್ನ ಸಂತ್ರಸ್ತ ಮಗುವಿಗೆ ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಫ್ಯಾಕ್ಟರಿ ಪಕ್ಕದ ನೀಲಗಿರಿ ತೋಟಕ್ಕೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.

ಬಾಲಕಿ ಚೀರಾಟ ಹಾಗೂ ಗುಪ್ತಾಂಗದಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಪೋಷಕರು ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

PREV
Read more Articles on

Latest Stories

ಬಿಕ್ಲು ಶಿವ ಹತ್ಯೆಯ ತನಿಖೆ ಚುರುಕು: ಪ್ರಮುಖ ಆರೋಪಿಗೆ ಪೊಲೀಸರ ಶೋಧ
ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಬೈರತಿಗೆ ಪೊಲೀಸ್‌ ನೋಟಿಸ್‌
ರೌಡಿ ಹತ್ಯೆ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌