ಕನ್ನಡಪ್ರಭ ವಾರ್ತೆ ಮದ್ದೂರು
ಮೈಸೂರು ಜಿಲ್ಲೆ ಬನ್ನೂರು ಸಮೀಪದ ಗೊರವನಹಳ್ಳಿಯ ರತ್ನಮ್ಮ ಜಯರಾಮು ದಂಪತಿ ಪುತ್ರ ಅರುಣ್ ಕುಮಾರ್ (23) ಮೃತಪಟ್ಟ ಯುವಕ. ಕಳೆದ ಐದಾರು ವರ್ಷಗಳಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದನು. ಸೋಮವಾರ ಸಂಜೆ ಸಕ್ಕರೆ ಪಾಕ ತೆಗೆಯುವ ಸ್ಥಳವನ್ನು ಸ್ವಚ್ಛಗೊಳಿಸಲು ಇಳಿದಾಗ ಕಾಲುಜಾರಿ ಒಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆ ಬಳಿಕ ಕಾರ್ಖಾನೆ ಸಿಬ್ಬಂದಿ ಅರುಣ್‌ನನ್ನು ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದಿದರೂ ಆತ ಮೃತಪಟ್ಟಿದ್ದರು. ನಂತರ ಕುಟುಂಬಸ್ಥರು, ಹೋರಾಟಗಾರರು ಮೃತದೇಹವನ್ನು ಕಾರ್ಖಾನೆ ಮುಖ್ಯದ್ವಾರದ ಬಳಿ ಇರಿಸಿ ಪ್ರತಿಭಟನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ತಹಸೀಲ್ದಾರ್ ಶಿವಕುಮಾರ್ ಬಿರಾದಾರ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಅನಿಲ್ ನೇತೃತ್ವದಲ್ಲಿ ಕಾರ್ಖಾನೆ ಅಧಿಕಾರಿಗಳು ಮತ್ತು ಕುಟುಂಬಸ್ಥರ ನಡುವೆ ಮಾತುಕತೆ ನಡೆದು ಅಂತಿಮವಾಗಿ ಕುಟುಂಬಕ್ಕೆ 22 ಲಕ್ಷ ರು. ಪರಿಹಾರ ನೀಡುವುದಾಗಿ ಕಾರ್ಖಾನೆ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು ಅಂತ್ಯಕ್ರಿಯೆ ನಡೆಸಿದ್ದಾರೆ.