ನಾಡಿದ್ದಿನಿಂದ 2000 ಕಿ.ಮಿ. ಫುಟ್ಪಾತ್‌ಸುರಕ್ಷತಾ ಅಭಿಯಾನ : ಕೃಷ್ಣ ಬೈರೇಗೌಡ

KannadaprabhaNewsNetwork |  
Published : Jun 30, 2026, 04:00 AM ISTUpdated : Jun 30, 2026, 07:31 AM IST
Krishna byregowda

ಸಾರಾಂಶ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ಬೆಂಗಳೂರು ನಗರರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

  ಬೆಂಗಳೂರು :  ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಂತೆ ಬೆಂಗಳೂರು ನಗರರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಜು.1ರಿಂದ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಕೈಗೆತ್ತಿಕೊಳ್ಳುವ ಸಂಬಂಧ ಸೋಮವಾರ ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿ, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣಾ ಕಾಯ್ದೆಯನ್ನು ಪಾಲಿಸಬೇಕು. ಸಮಗ್ರ ಯೋಜನೆ ರೂಪಿಸಿಕೊಂಡು, ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಹೇಳಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು

ಮೊದಲಿಗೆ ಯಾವ ಯಾವ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂಬುದರ ಪಟ್ಟಿಯನ್ನು ಸಿದ್ಧಪಡಿಸಬೇಕು. ನಂತರ ಅಂಗಡಿ ಮಾಲೀಕರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಬೇಕು. ಅನಂತರ ನೋಟಿಸ್ ನೀಡಿ, ಅದರ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು, ಉದ್ದಿಮೆ ಪರವಾನಗಿ ನೀಡುವ ಆರೋಗ್ಯಾಧಿಕಾರಿಗಳು, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಒತ್ತುವರಿ ತೆರವು ತಂಡಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ನಗರದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳು ಸೇರಿದಂತೆ ಪ್ರಮುಖ ರಸ್ತೆಗಳನ್ನು ನಾನ್-ವೆಂಡಿಂಗ್ ವಲಯಗಳಾಗಿ ಅಧಿಸೂಚನೆ ಹೊರಡಿಸಲು ಕ್ರಮವಹಿಸಿ ಎಂದು ಸೂಚಿಸಿದರು.

ನಗರದಲ್ಲಿ ಸುಮಾರು 15 ಸಾವಿರ ಕಿ.ಮೀ. ರಸ್ತೆಗಳಿದ್ದು, ಇದರಲ್ಲಿ ಸುಮಾರು 1500 ಕಿ.ಮೀ. ರಸ್ತೆಯನ್ನು ನಾನ್-ವೆಂಡಿಂಗ್ ವಲಯಗಳಾಗಿ ಗುರುತಿಸಬೇಕು. ಇಲ್ಲಿ ಬೀದಿ ವ್ಯಾಪಾರಿಗಳು ಜೀವನ ನಡೆಸಲು ಮುಕ್ತ ಅವಕಾಶವಿದೆ. ಪಾಲಿಕೆ ಗುರುತಿಸುವ ನಾನ್-ವೆಂಡಿಂಗ್ ವಲಯಗಳ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮುಕ್ತವಾಗಿ ವ್ಯಾಪಾರ ನಡೆಸಬಹುದು ಎಂದು ವಿವರಿಸಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ನಾಗರಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಯಾವ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಯಲಿದೆಯೋ, ಆ ರಸ್ತೆಗಳಲ್ಲಿ ಮುಂಚಿತವಾಗಿಯೇ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ವೇಳೆ ಒತ್ತುವರಿಯನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸದಿದ್ದರೆ ಪಾಲಿಕೆಯಿಂದ ತೆರವುಗೊಳಿಸಿ, ಕಾನೂನಿನ ಪ್ರಕಾರ ದಂಡ ವಿಧಿಸಲಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ.ಜಗದೀಶ್, ರಮೇಶ್ ಕೆ.ಎನ್, ಡಾ.ರಾಜೇಂದ್ರ ಕೆ.ವಿ, ಸಂಚಾರ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಪಾದಚಾರಿ ಮಾರ್ಗಗಳ ದುರಸ್ತಿಗೊಳಿಸಿ

ನಗರದಲ್ಲಿ ಎಲ್ಲೆಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತದೆಯೋ, ಅದೇ ಸ್ಥಳಗಳಲ್ಲಿ ಸಮಾನಾಂತರವಾಗಿ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನೂ ತಕ್ಷಣ ಕೈಗೊಳ್ಳಬೇಕು. ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ಹಾಳಾಗಿರುವ ಸ್ಲ್ಯಾಬ್‌ಗಳು, ಕರ್ಬ್‌ಗಳು ಹಾಗೂ ಅಗತ್ಯ ಸಿವಿಲ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.
Read more Articles on

Recommended Stories

40ನೇ ಹುಟ್ಟುಹಬ್ಬ ಆಚರಿಸಿಕೊಂಡ ಡಾಲಿ ಧನಂಜಯ
ಟಾಕ್ಸಿಕ್‌ ಚಿತ್ರದ ಮೊದಲ ದಿನದ ಶೋಗಳ ಟಿಕೆಟ್‌ ಬಹುತೇಕ ಸೋಲ್ಡ್‌ ಔಟ್‌