ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ

Published : Aug 03, 2025, 11:48 AM IST
bhavana ramanna

ಸಾರಾಂಶ

ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೊಮ್ಮಘಟ್ಟದಲ್ಲಿರುವ ನಿವಾಸದಲ್ಲಿ ಸೀಮಂತ ಶಾಸ್ತ್ರ ನಡೆಯಿತು.  

  ಬೆಂಗಳೂರು : ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೊಮ್ಮಘಟ್ಟದಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಈ ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಮತ್ತು ಆಪ್ತರನ್ನು ಮಾತ್ರ ಆಹ್ವಾನಿಸಲಾಗಿತ್ತು. 

ಸರಳವಾಗಿ ನಡೆದ ಈ ಸೀಮಂತದಲ್ಲಿ ಸಂಪ್ರದಾಯದಂತೆ ಮತ್ತೈದೆಯರು ಭಾವನಾಗೆ ಮಡಿಲು ತುಂಬುವ ಶಾಸ್ತ್ರ ಮಾಡಿ ಸಿಹಿ ತಿನ್ನಿಸಿದರು 

. ಹಳದಿ ಮಿಶ್ರಿತ ಹೂವುಗಳಿಂದ ಅಲಂಕಾರ ಮಾಡಿದ್ದ ಜಾಗದಲ್ಲಿ ಕೂತು ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಸಿಕೊಂಡಿದ್ದಾರೆ. ಏಳು ತಿಂಗಳ ಗರ್ಭಿಣಿಯಾಗಿರುವ ಭಾವನಾ ಅವರು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ. ಭಾವನಾ ಅವರು ಮದುವೆಯಾಗದೆ ಐವಿಎಫ್‌ ಮೂಲಕ ತಾಯಿಯಾಗುತ್ತಿದ್ದಾರೆ.

PREV
Read more Articles on

Recommended Stories

ವೈರಲ್ ಆಗುತ್ತಿರುವ ಸುದೀಪ್‌ ಹೊಸ ಲುಕ್ಕು : ಗಮನ ಸೆಳೆಯುತ್ತಿರುವ ಹೊಸ ಹೇರ್ ಸ್ಟೈಲ್‌
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳು ನಟ ಮದನ್ ಬಾಬ್ ನಿಧನ