ಕನ್ನಡಪ್ರಭ ಸಿನಿವಾರ್ತೆ
ಇದು ಪ್ರೀತಿ- ಪ್ರೇಮ ಹಾಗೂ ಫ್ಯಾಮಿಲಿ ಎಮೋಷನ್ ಕತೆ ಇರುವ ಚಿತ್ರ. ರೆಚೆಲ್ ಡೇವಿಡ್ ಹಾಗೂ ಅಶ್ವಥಿ ನಾಯಕಿಯರು. ಪ್ರಮೋದ್ ಮಾತನಾಡಿ, ‘ನಾನು ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಸಿನಿಮಾ ಇದು. ನಾವು ಅಂದುಕೊಂಡಂತೆ ಸಿನಿಮಾ ಮೂಡಿ ಬಂದಿದೆ. ಎಲ್ಲರಿಗೂ ಸಿನಿಮಾ ಇಷ್ಟವಾಗುತ್ತದೆ’ ಎಂದರು.
ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಉಪಸ್ಥಿತರಿದ್ದರು. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ ನಟಿಸಿದ್ದಾರೆ. ಉದಯ್ ಲೀಲಾ ಕ್ಯಾಮೆರಾ, ಗುಮ್ಮಿನೇನಿ ವಿಜಯ್ ಸಂಗೀತ ಇದೆ.