ನಿಮ್ಮ ಹಾರೈಕೆಯೇ ನನಗೆ ದಾರಿ ತೋರುವ ಬೆಳಕು: ದರ್ಶನ್‌

KannadaprabhaNewsNetwork |  
Published : Feb 19, 2025, 12:45 AM IST
ದರ್ಶನ್‌ | Kannada Prabha

ಸಾರಾಂಶ

ದರ್ಶನ್ ಅಭಿಮಾನಿಗಳಿಗೆ ಪತ್ರ ಬರೆದು ನೀವೇ ನನ್ನ ಬಾಳಿನ ಬೆಳಕಿನ ಹಾದಿ ತೋರುವವರು ಎಂದಿದ್ದಾರೆ.

ಕನ್ನಡಪ್ರಭ ಸಿನಿವಾರ್ತೆ‘ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳೇ ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತರ ನನ್ನಲ್ಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ.’

- ಇಧು ಅಭಿಮಾನಿಗಳಿಗೆ ದರ್ಶನ್‌ ಬರೆದಿರುವ ಪತ್ರದ ಸಾಲು. ತನ್ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಹರಿದುಬಂದಿರುವ ಶುಭ ಹಾರೈಕೆಗಳಿಗೆ ಪ್ರತಿಯಾಗಿ ದರ್ಶನ್‌ ಸೋಷಲ್‌ ಮೀಡಿಯಾದಲ್ಲಿ ಈ ಪತ್ರ ಬರೆದಿದ್ದಾರೆ.

‘ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂಥಾ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಚಿರಋಣಿ. ನಿಮ್ಮ ಪ್ರೀತಿ, ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹವು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ’ ಎಂದು ದರ್ಶನ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

PREV
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.

Recommended Stories

ಕಾಂತಾರ ಅಧ್ಯಾಯ 2 ಇಲ್ಲಿಂದ ಶುರು! ಹೊಂಬಾಳೆ ಫಿಲಂಸ್‌ ಅನ್‌ಫಾಲೋ
300 ಕೋಟಿಯತ್ತ ದಾಪುಗಾಲು ಹಾಕುತ್ತಿರುವ ಧುರಂಧರ್‌ 2