ಸಿನಿವಾರ್ತೆ
‘ಕಾಂತಾರ 1’ ಸಿನಿಮಾದಲ್ಲಿ ಬರುವ ದೈವದ ಪಾತ್ರಗಳನ್ನು ಅನುಕರಿಸದೇ, ಜನರ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕೆಂದು ಹೊಂಬಾಳೆ ಫಿಲಂಸ್ ಪ್ರೇಕ್ಷಕರಲ್ಲಿ ಮನವಿ ಮಾಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ , ‘ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ.
ಚಿತ್ರದಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ. ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವುಂಟುಮಾಡುತ್ತವೆ’ ಎಂದು ಹೇಳಿದೆ.