ಜ.8ರಂದು ನನ್ನ ಜನ್ಮದಿನಕ್ಕೆ ಫ್ಲೆಕ್ಸ್ ಕಟ್ಟಬೇಡಿ ಎಂದು ನಟ ಯಶ್ ಮನವಿ ಮಾಡಿದ್ದಾರೆ.
ಬೆಂಗಳೂರು
‘ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಲಿ’ ಎಂದು ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
ಕಳೆದ ಬಾರಿ ಯಶ್ ಜನ್ಮದಿನದ ವೇಳೆ ಫ್ಲೆಕ್ಸ್ ಕುಸಿದು, ಅಭಿಮಾನಿಯೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ, ಫ್ಲೆಕ್ಸ್, ಬ್ಯಾನರ್‌ಗಳ ಆಡಂಬರ ಬೇಡ ಎಂದು ಅಭಿಮಾನಿಗಳಲ್ಲಿ ಕಳಕಳಿಯಿಂದ ವಿನಂತಿಸಿದ್ದಾರೆ.
‘ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರಬೇಡಿ. ನಿಮ್ಮ ಕುಟುಂಬದವರು ಹೆಮ್ಮೆ ಪಡುವಂಥ ಕೆಲಸ ಮಾಡಿ. ನಿಮ್ಮಿಂದ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದಿಲ್ಲ. ಆದಷ್ಟು ಬೇಗ ನಿಮ್ಮನ್ನು ಭೇಟಿ ಮಾಡುತ್ತೇನೆ’ ಎಂದು ಯಶ್ ಹೇಳಿದ್ದಾರೆ.
ಈ ವೇಳೆ ಅಭಿಮಾನಿಗಳಿಗೆ ಹೊಸ ವರ್ಷದ ಶುಭಹಾರೈಕೆಯನ್ನೂ ಸಲ್ಲಿಸಿದ್ದಾರೆ. ಸದ್ಯ ಯಶ್ ‘ಟಾಕ್ಸಿಕ್’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ವರ್ಷದ ಅಂತ್ಯದಲ್ಲಿ ಈ ಬಹುನಿರೀಕ್ಷಿತ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.