- ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ
- ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ---
ಕನ್ನಡಪ್ರಭ ವಾರ್ತೆ ಮೈಸೂರುಊಹಾಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನು ನೀವು ಗೌರವದಿಂದ ನಡೆಸಿಕೊಂಡರೇ ನಿಮ್ಮನ್ನು ಸಮಾಜದ 4ನೇ ಅಂಗ ಅಂತ ಕರೆಯೋಕೆ ಆಗುತ್ತದಾ? ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿ ಆಗಿರುತ್ತದೆ ಎಂದು ಅವರು ಹೇಳಿದರು.
ಪತ್ರಿಕಾ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಇದ್ದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿ ಆಗಲು ಸಾಧ್ಯ. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು. ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ ಎಂದು ಅವರು ತಿಳಿಸಿದರು.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಕೆ. ಹರೀಶ್ ಗೌಡ, ಡಿ. ರವಿಶಂಕರ್, ಅನಿಲ್ ಚಿಕ್ಕಮಾದು, ಡಾ.ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ವರುಣ ಕ್ಷೇತ್ರ ಆಶ್ರಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಂಸದ ಕಾಗಲವಾಡಿ ಎಂ. ಶಿವಣ್ಣ, ಎಂಡಿಎ ಮಾಜಿ ಅಧ್ಯಕ್ಷರಾದ ಎಚ್.ವಿ. ರಾಜೀವ್, ಯಶಸ್ವಿ ಸೋಮಶೇಖರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಚ್.ಬಿ. ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡ ಬಿ.ವಿ. ಮಲ್ಲಿಕಾರ್ಜುನಯ್ಯ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ, ಉಪಾಧ್ಯಕ್ಷರಾದ ಅನುರಾಗ್ ಬಸವರಾಜ್, ಧರ್ಮಾಪುರ ನಾರಾಯಣ್, ಕಾರ್ಯದರ್ಶಿ ರಂಗಸ್ವಾಮಿ, ಖಜಾಂಚಿ ನಾಗೇಶ್ ಪಾಣತ್ತಲೆ ಇದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಿ. ರಾಘವೇಂದ್ರ ನಿರೂಪಿಸಿದರು.
ಕೋಟ್...
- ಸಿದ್ದರಾಮಯ್ಯ, ಮುಖ್ಯಮಂತ್ರಿ