ಕುಂದಾಪುರ(ಉಡುಪಿ): ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರದ ಸಹ ಕಲಾವಿದ ನದಿಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಡೆದಿದೆ.
ಕೇರಳ ಮೂಲದ ಕಪಿಲ್ ಮೃತ ಕಲಾವಿದ. ಕೊಲ್ಲೂರು ಆಸುಪಾಸಿನಲ್ಲಿ ‘ಕಾಂತಾರ ಚಾಪ್ಟರ್ 1’ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಕಳೆದ 3 ದಿನಗಳಿಂದ ಚಿತ್ರೀಕರಣ ಇಲ್ಲದ ಕಾರಣ ಮಂಗಳವಾರ ಸಂಜೆ ಕಪಿಲ್ ಅವರು ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.