ಸಿನಿವಾರ್ತೆ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ವಿಶ್ವಾದ್ಯಂತ ಅಕ್ಟೋಬರ್ 2ರಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಕೇವಲ 21 ದಿನಗಳಷ್ಟೇ ಬಾಕಿ ಇವೆ. ಇದೀಗ ಚಿತ್ರ ವಿತರಣೆಯ ಕಾರ್ಯ ಭರದಿಂದ ನಡೆಯುತ್ತಿದೆ.
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿನ ಸಿನಿಮಾ ಡಿಸ್ಟ್ರಿಬ್ಯೂಷನ್ ಕುರಿತ ಮಾಹಿತಿಯನ್ನು ಹೊಂಬಾಳೆ ಫಿಲಂಸ್ ನೀಡಿದ್ದು, ಡ್ರೀಮ್ ಸ್ಕ್ರೀನ್ಸ್ ಇಂಟರ್‌ನ್ಯಾಷನಲ್ ಈ ಎರಡು ದೇಶಗಳಲ್ಲಿ ಸಿನಿಮಾ ವಿತರಣೆ ಮಾಡಲಿದೆ.
ಕೇರಳದಲ್ಲಿ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ಅವರ ಪೃಥ್ವಿರಾಜ್ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ವಿತರಿಸಲಿದೆ. ಕಾಂತಾರದ ಮೊದಲ ಭಾಗವನ್ನೂ ಪೃಥ್ವಿರಾಜ್ ಅವರೇ ಕೇರಳದಲ್ಲಿ ವಿತರಣೆ ಮಾಡಿದ್ದರು.