ರಾಗಿಣಿ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ.
‘ರಾಮರಸ’ ಚಿತ್ರದ ಹೊರತಾಗಿ ಜಟ್ಟ ಗಿರಿರಾಜ್ ಮತ್ತೊಂದು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ನಾಯಕಿಯಾಗಿ ರಾಗಿಣಿ ನಟಿಸಲಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ.
ಜಟ್ಟ ಗಿರಿರಾಜ್, ‘ಕೌಂಡಿನ್ಯ ನನ್ನ ನೆಚ್ಚಿನ ಲೇಖಕರು. ಅವರ ಕಥೆಗಳಿಂದ ಪ್ರೇರಿತನಾಗಿ ಈ ಚಿತ್ರಕ್ಕೆ ಕಥೆ ಮಾಡಿದ್ದೇನೆ. ರಾಗಿಣಿ ಜೊತೆ ಇದು ನನ್ನ ಮೊದಲ ಸಿನಿಮಾ’ ಎಂದರು.
ರಾಗಿಣಿ, ‘ಚಿತ್ರದ ಫಸ್ಟ್ ಲುಕ್‌ನಂತೆಯೇ ಚಿತ್ರದ ಶೀರ್ಷಿಕೆ ಕೂಡ ಸಖತ್ತಾಗಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಲಿದ್ದೇವೆ’ ಎಂದರು. ರಾಮಕೃಷ್ಣ ನಿಗಾಡಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.
Stay updated with the latest Kannada Cinema News (ಸಿನಿಮಾ ಸುದ್ದಿ) — Sandalwood, TV serials, celebrity gossip, movie reviews, and trending film-world updates. Read fresh entertainment news headlines on Kannada Prabha.