ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆ: ಮಹಿಳಾ ಆಯೋಗಕ್ಕೆ 2 ದೂರು

Published : Oct 05, 2024, 10:42 AM IST
Bigg Boss Kannada

ಸಾರಾಂಶ

ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ರಾಜ್ಯ ಮಹಿಳಾ ಆಯೋಗಕ್ಕೆ 2 ದೂರು ಸಲ್ಲಿಕೆಯಾಗಿವೆ. ವಕೀಲೆ ರಕ್ಷಿತಾ ಸಿಂಗ್‌ ಮತ್ತು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಈ ಸಂಬಂಧ ದೂರು ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು: ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ರಾಜ್ಯ ಮಹಿಳಾ ಆಯೋಗಕ್ಕೆ 2 ದೂರು ಸಲ್ಲಿಕೆಯಾಗಿವೆ. ವಕೀಲೆ ರಕ್ಷಿತಾ ಸಿಂಗ್‌ ಮತ್ತು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಈ ಸಂಬಂಧ ದೂರು ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ. ಬಿಗ್‌ ಬಾಸ್‌ ಕನ್ನಡ 11ನೇ ಆವೃತ್ತಿಯಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. 

ಮಹಿಳಾ ಸ್ಪರ್ಧಿಗಳಿಗೆ ಕಿರುಕುಳ ನೀಡುತ್ತಿರುವುದರಿಂದ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಸ್ವರ್ಗ ಮತ್ತು ನರಕ ಎಂಬ 2 ವಿಚಾರದಲ್ಲಿ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿ ಇರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ಆರೋಪಿಸಲಾಗಿದೆ. ಪುರುಷ ಮತ್ತು ಮಹಿಳೆಯರನ್ನು ಜೈಲಿನ ರೂಪದಲ್ಲಿರುವ ಬಂದೀಖಾನೆಯಂತಹ ಕೊಠಡಿಯಲ್ಲಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ. ಕೇವಲ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿದೆ. ಸಂವಿಧಾನದ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ನೀಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ನಿದ್ರಿಸಲು ವ್ಯವಸ್ಥೆ ಮಾಡಿಲ್ಲ ಎಂದು ಟೀಕಿಸಲಾಗಿದೆ.

ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಬೇಕು. ಇದರಿಂದ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಕಾರ್ಯಕ್ರಮಕ್ಕಾಗಿ ಸ್ಪರ್ಧಿಗಳೊಂದಿಗೆ ಕಾನೂನುಬದ್ಧವಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನಕ್ಕೆ ವಿರುದ್ಧವಾದುದು ಎಂದು ದೂರಿನಲ್ಲಿ ವಿವರಿಸಲಾಗಿದೆ.

PREV

Recommended Stories

ವೈರಲ್ ಆಗುತ್ತಿರುವ ಸುದೀಪ್‌ ಹೊಸ ಲುಕ್ಕು : ಗಮನ ಸೆಳೆಯುತ್ತಿರುವ ಹೊಸ ಹೇರ್ ಸ್ಟೈಲ್‌
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಮಿಳು ನಟ ಮದನ್ ಬಾಬ್ ನಿಧನ