ನಿತೀಶ್ ತಿವಾರಿ ನಿರ್ದೇಶನದ ಬಹು ನಿರೀಕ್ಷಿತ ರಾಮಾಯಣ ಚಿತ್ರೀಕರಣದಲ್ಲಿ ರಾಕಿಂಗ್‌ ಸ್ಟಾರ್ ಯಶ್ ಭಾಗಿ

ಸಾರಾಂಶ

ನಿತೀಶ್ ತಿವಾರಿ ನಿರ್ದೇಶನದ ಬಹುಕೋಟಿ ಬಜೆಟ್‌ನ ‘ರಾಮಾಯಣ’ ಶೂಟಿಂಗ್‌ನಲ್ಲಿ ರಾಕಿಂಗ್‌ ಸ್ಟಾರ್ ಯಶ್ ಭಾಗಿಯಾಗಿದ್ದಾರೆ. ಈ ಸಿನಿಮಾದಲ್ಲಿ ಅವರು ರಾವಣನ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

ಸಿನಿವಾರ್ತೆ

ನಿತೀಶ್ ತಿವಾರಿ ನಿರ್ದೇಶನದ ಬಹುಕೋಟಿ ಬಜೆಟ್‌ನ ‘ರಾಮಾಯಣ’ ಶೂಟಿಂಗ್‌ನಲ್ಲಿ ರಾಕಿಂಗ್‌ ಸ್ಟಾರ್ ಯಶ್ ಭಾಗಿಯಾಗಿದ್ದಾರೆ. ಈ ಸಿನಿಮಾದಲ್ಲಿ ಅವರು ರಾವಣನ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

ಸದ್ಯ ಯುದ್ಧದ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿದ್ದು, ಮುಂಬೈನ ಅಕ್ಸ ಬೀಜ್‌ ಭಾಗದಲ್ಲಿ ಶೂಟಿಂಗ್ ಮಾಡಲಾಗುತ್ತಿದೆ.

ಯಶ್‌ ಅಭಿನಯಿಸುವ ರಾವಣನ ಪಾತ್ರಕ್ಕಾಗಿ ನೈಜ ಚಿನ್ನದಿಂದ ಉಡುಗೆಗಳನ್ನು ತಯಾರಿಸಲಾಗಿದ್ದು, ಹರ್‌ಪ್ರೀತ್ ಹಾಗೂ ರಿಂಪಲ್‌ ಡಿಸೈನ್ ಮಾಡಿದ್ದಾರೆ.

ಎರಡು ಭಾಗಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದ್ದು, ಮೊದಲ ಭಾಗ 2026ರ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಲಿದೆ. ರಣ್‌ಬೀರ್ ಹಾಗೂ ಸಾಯಿ ಪಲ್ಲವಿ ನಾಯಕ ನಾಯಕಿಯಾಗಿರುವ ಈ ಸಿನಿಮಾವನ್ನು ನಮಿತ್ ಮಲ್ಹೋತ್ರ ಹಾಗೂ ಯಶ್ ನಿರ್ಮಿಸುತ್ತಿದ್ದಾರೆ.

Share this article