ಅಧಿವೇಶನದಲ್ಲಿ ನೇಕಾರರ ಸಮಸ್ಯೆ ಚರ್ಚಿಸಲು ಮನವಿ

KannadaprabhaNewsNetwork |  
Published : Nov 17, 2023, 06:45 PM IST
ನೇಕಾರರ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸಲು ಆಗ್ರಹಿಸಿ ವಿಜಯಕುಮಾರ ಭಾಪ್ರಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ನೇಕಾರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಬೇಕು

ಕನ್ನಡಪ್ರಭವಾರ್ತೆ ಅಮೀನಗಡ

ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ನೇಕಾರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರಗೆ ರಾಜ್ಯ ನೇಕಾರ ಸಮುದಾಯದ ಯುವಮುಖಂಡ ವಿಜಯಕುಮಾರ ಭಾಪ್ರಿ ಮನವಿ ಸಲ್ಲಿಸಿದರು.ಸದ್ಯ ನನೆಗುದಿಗೆ ಬಿದ್ದಿರುವ ಹಲವು ಬೇಡಿಕೆಗಳು, ಗುಡಿ ಕೈಗಾರಿಕೆಗಳಲ್ಲಿ ಬರುವ ನೇಕಾರಿಕೆಯಲ್ಲಿ ವೃತ್ತಿನಿರತ ನೇಕಾರರು, ನೇಯ್ಗೆಯಲ್ಲಿ ಇತರೆ ಸೇವೆ ಸಲ್ಲಿಸುವ ಉಪಕಸುಬುದಾರರನ್ನು ಸರ್ಕಾರ ಕಾರ್ಮಿಕರೆಂದು ಪರಿಗಣಿಸಿ, ಕಟ್ಟಡ ಕಾರ್ಮಿಕರಿಗೆ ಸಿಗುವ ಎಲ್ಲ ಯೋಜನೆಗಳು ಸೌಲಭ್ಯಗಳನ್ನು ವಿಸ್ತರಿಸುವುದು, ಕೈಮಗ್ಗ ಅಭಿವೃದ್ಧಿ ನಿಗಮದ ನೇಕಾರರಿಗೆ ವೇಳೆಗನುಸಾರವಾಗಿ ನೂಲು ಪೂರೈಕೆ ಸೇರಿ ಹಲವು ಬೇಡಿಕೆಗಳ ಬಗ್ಗೆ ಚಳಿಗಾಳ ಅಧಿವೇಶನದಲ್ಲಿ ಚರ್ಚಿಸಬೇಕೆಂದು ಒತ್ತಾಯಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2 ದಿನಕ್ಕಾಗುವಷ್ಟೇ ಎಲ್ಪಿಜಿ - ಹೋಟೆಲ್‌ನಲ್ಲಿ ಮೆನು ಕಡಿತ, ಕಾಫಿ ಬದಲು ಜ್ಯೂಸ್‌!
40 ಲಕ್ಷ ಮಹಿಳೆಯರಿಗೆ 9000 ರು. ಗ್ಯಾರಂಟಿ ! ಎಲೆಕ್ಷನ್‌ ಮುನ್ನ ಬಂಪರ್‌