‘ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯವೂ ಬಹುಮುಖ್ಯ’

KannadaprabhaNewsNetwork | Published : Oct 11, 2023 12:45 AM

ಸಾರಾಂಶ

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಜಾಥಾವನ್ನು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವ ಮಾನಸಿಕ ಆರೋಗ್ಯದ ಜಾಗೃತಿ ಜಾಥಾ । ಜಿಲ್ಲಾಧಿಕಾರಿ ಗೀತಾ ಹುಡೇದ ಅಭಿಮತ ಕನ್ನಡಪ್ರಭ ವಾರ್ತೆ ಚಾಮರಾಜನಗರ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳುವುದು ಕೂಡ ಅವಶ್ಯಕವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಜಾಥಾವನ್ನು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಎಲ್ಲರೂ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯಿಂದ ಉತ್ತಮ ಜೀವನ ನಡೆಸುವಂತಾಗಬೇಕು. ಮಾನಸಿಕ ಆರೋಗ್ಯವನ್ನು ಸಮಾನ ಸ್ಥಿತಿಯಲ್ಲಿ ಕಾಪಾಡಿಕೊಳ್ಳಬೇಕು. ದೈಹಿಕ ಸಮಸ್ಯೆ ಉಂಟಾದಾಗ ಚಿಕಿತ್ಸೆ ತೆಗೆದುಕೊಳ್ಳುವ ರೀತಿಯಲ್ಲಿ ಮಾನಸಿಕ ಸಮಸ್ಯೆಗಳಿಗೂ ಚಿಕಿತ್ಸೆ ತೆಗೆದುಕೊಳ್ಳುವುದು ಸೂಕ್ತವಾಗಿದೆ ಎಂದರು. ಸಮಸ್ಯೆಗಳನ್ನು ಅತಿಯಾಗಿ ಮನಸ್ಸಿಗೆ ತೆಗೆದುಕೊಳ್ಳದೇ ಸರಿಯಾಗಿ ನಿಭಾಯಿಸಿದಾಗ ಮಾತ್ರ ಮಾನಸಿಕ ಕಾಯಿಲೆಯಿಂದ ದೂರ ಉಳಿಯಬಹುದು. ವ್ಯಕ್ತಿ ಆರೋಗ್ಯವಾಗಿರಲು ನಗುವು ಅತಿ ಹೆಚ್ಚು ಉಪಕಾರಿಯಾಗಿದೆ. ಜೀವನದ ಸಮಸ್ಯೆಗಳನ್ನು ಖುಷಿಯಿಂದ ಸ್ವೀಕರಿಸಬೇಕು. ಆರೋಗ್ಯಕರ ಮನಸ್ಥಿತಿ ಮೈಗೂಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಮಾತನಾಡಿ, ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಥಾವನ್ನು ಸಾರ್ವಜನಿಕರಿಗೆ ಮಾನಸಿಕ ರೋಗದ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದೆ. ದೇಹಕ್ಕೆ ಮಾತ್ರವಲ್ಲದೇ ಮನಸ್ಸಿಗೂ ಚಿಕಿತ್ಸೆಯ ಅವಶ್ಯಕತೆ ಇದೆ. ಜೀವನದಲ್ಲಿ ಒತ್ತಡದಿಂದ, ಒಂಟಿತನದಿಂದ ಮಾನಸಿಕ ಕಾಯಿಲೆಗಳು ಕಂಡುಬರುವುದು ಸಹಜವಾಗಿದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ತೆಗೆದುಕೊಂಡಾಗ ಮಾತ್ರ ಕಾಯಿಲೆ ನಿವಾರಣೆಯಾಗಲು ಸಾಧ್ಯವಾಗುತ್ತದೆ. ಸಕರಾತ್ಮಕವಾಗಿ ಚಿಂತಿಸಿದಾಗ ಆರೋಗ್ಯಕರ ಜೀವನ ನಡೆಸಬಹುದು ಎಂದರು. ಜಿಲ್ಲಾ ಮಾನಸಿಕ ಕಾರ್ಯಕ್ರಮ ಅಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ಅ. 10ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಎಲ್ಲೆಡೆ ಆಚರಿಸಲಾಗುತ್ತದೆ. ಸಾರ್ವಜನಿಕರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದೇ ವಿಶ್ವ ಮಾನಸಿಕ ಆರೋಗ್ಯ ದಿನದ ಆಚರಣೆಯ ಉದ್ದೇಶವಾಗಿದೆ. ಮೂಲಭೂತ ಹಕ್ಕುಗಳ ರೀತಿಯಲ್ಲಿ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳುವುದು ಸಾರ್ವತ್ರಿಕ ಮಾನವ ಹಕ್ಕು ಎಂಬುವ ಘೋಷಣೆ ಮೂಲಕ ಈ ವರ್ಷದ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಮಾನಸಿಕ ಕಾಯಿಲೆಯನ್ನು ಸಮಾಜದಿಂದ ಹೊಗಲಾಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು. ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಮನೋರೋಗ ತಜ್ಞರಾದ ಡಾ. ರಾಜೇಶ್, ಡಾ. ಗೋಕುಲ್, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವೈದ್ಯಾಧಿಕಾರಿ ಡಾ. ಉಮಾರಾಣಿ, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಪ್ರೊ. ಕೃಷ್ಣಮೂರ್ತಿ, ಇತರರು ಇದ್ದರು. --------------------- 10ಸಿಎಚ್‌ಎನ್‌51 ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಜಾಥಾವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. -----------------

Share this article