ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದಿಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಸಿಸೋಡಿಯಾ ಪ್ರಭಾವಿ ವ್ಯಕ್ತಿ ಆಗಿರುವ ಕಾರಣ ಅವರಿಗೆ ಸಾಕ್ಷ್ಯ ನಾಶ ಮಾಡಬಹುದಾದ ಶಕ್ತಿ ಇರುತ್ತದೆ ಎಂಬ ಕಾರಣ ನೀಡಿ ಅರ್ಜಿ ವಜಾಗೊಳಿಸಿದೆ.
ಆದರೆ ವಾರಕ್ಕೆ ಒಮ್ಮೆ ತಮ್ಮ ಪತ್ನಿಯನ್ನು ಭೇಟಿ ಮಾಡುವುಕ್ಕೆ ಅವಕಾಶವನ್ನು ವಿಸ್ತರಿಸಿದೆ. ಜೊತೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಮಾ.9ರಂದು ಸಿಸೋಡಿಯಾ ಅವರನ್ನು ಇ.ಡಿ. ಬಂಧಿಸಿತ್ತು.