ಸುಪ್ರೀಂ, ಸಿಜೆಐ ವಿರುದ್ಧ ಆರೋಪ ಮಾಡಿದ್ದ ದುಬೆಗೆ ಕೋರ್ಟ್‌ ತಪರಾಕಿ

KannadaprabhaNewsNetwork |  
Published : May 09, 2025, 12:36 AM ISTUpdated : May 09, 2025, 03:22 AM IST
ದುಬೆ | Kannada Prabha

ಸಾರಾಂಶ

  ಮುಖ್ಯ ನ್ಯಾಯಮೂರ್ತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ.

 ನವದೆಹಲಿ: ವಕ್ಫ್‌ ತಿದ್ದುಪಡಿ ವಿಧೇಯಕ ಹಾಗೂ ಮಸೂದೆಗೆ ಸಹಿ ಹಾಕುವಂತೆ ರಾಷ್ಟ್ರಪತಿಗೆ ಗಡುವು ನೀಡಿ ಆದೇಶ ಹೊರಡಿಸಿದ ವಿಷಯ ಮುಂದಿಟ್ಟುಕೊಂಡು ತನ್ನ ಮತ್ತು ಮುಖ್ಯ ನ್ಯಾಯಮೂರ್ತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರನ್ನು ಸುಪ್ರೀಂ ಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. ದುಬೆ ಹೇಳಿಕೆ ತೀವ್ರ ಬೇಜವಾಬ್ದಾರಿಯಿಂದ ಕೂಡಿದೆ ಮತ್ತು ಗಮನ ಸೆಳೆಯುವ ಪ್ರಯತ್ನದಂತಿದೆ. ಅವರಿಗೆ ಸಾಂವಿಧಾನಿಕ ನ್ಯಾಯಾಲಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬ ಕನಿಷ್ಠ ಜ್ಞಾನವೂ ಇದ್ದಂತಿಲ್ಲ ಎಂದು ಕಿಡಿಕಾರಿದೆ.

ದುಬೆ ವಿರುದ್ಧ ನ್ಯಾಯಾಂಗ ನಿಂದನೆ ದಾವೆ ಹೂಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಈ ಅರ್ಜಿಯನ್ನು ತಿರಸ್ಕರಿಸಿತು. ಆದರೆ ತಿರಸ್ಕರಿಸುವ ಆದೇಶ ಪ್ರಕಟಿಸುವಾಗ ಮೊನಚಾದ ನುಡಿಗಳನ್ನು ಆಡಿದ ಸಿಜೆಐ ಸಂಜೀವ್‌ ಖನ್ನಾ ಮತ್ತು ನ್ಯಾ. ಸಂಜಯ್‌ ಕುಮಾರ್‌ ಅವರ ಪೀಠ, ‘ದುಬೆ ಅವರ ಹೇಳಿಕೆಗಳು ನ್ಯಾಯಾಲಯ ಮತ್ತು ನ್ಯಾಯಾಧೀಶರ ಘನತೆಗೆ ಕುಂದುಂಟು ಮಾಡಿ ಜನರ ಗಮನಸೆಳೆಯುವ ಪ್ರಯತ್ನದ ಭಾಗ. ಈ ರೀತಿಯ ಅಸಂಬದ್ಧ ಹೇಳಿಕೆಗಳ ಮೂಲಕ ಕುಗ್ಗಿಹೋಗಲು ನ್ಯಾಯಾಲಯಗಳೇನು ಹೂವಿನಷ್ಟು ದುರ್ಬಲವಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ಮೇಲೆ ಸಾರ್ವಜನಿಕರ ವಿಶ್ವಾಸಾರ್ಹತೆ ಇಂಥ ಅಸಂಬದ್ಧ ಹೇಳಿಕೆಯಿಂದ ಕುಂದುತ್ತದೆ ಎಂದು ನಮಗೇನೂ ಅನಿಸುವುದಿಲ್ಲ ಎಂದು ಪೀಠ ಹೇಳಿದೆ.

ದುಬೆ ಅವರ ಹೇಳಿಕೆ ತೀವ್ರ ಬೇಜವಾಬ್ದಾರಿಯಿಂದ ಕೂಡಿದೆ. ಅವರಿಗೆ ಸಾಂವಿಧಾನಿಕ ನ್ಯಾಯಾಲಯಗಳ ಪಾತ್ರದ ಬಗ್ಗೆಯಾಗಲಿ, ಸಂವಿಧಾನದಡಿ ಅವುಗಳಿಗೆ ನೀಡಲಾದ ಕರ್ತವ್ಯಗಳು ಮತ್ತು ಬಾಧ್ಯತೆಗಳ ಕುರಿತಾಗಲಿ ಯಾವುದೇ ಜ್ಞಾನ ಇದ್ದಂತಿಲ್ಲ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಇದೇ ವೇಳೆ, ಕೋಮುದ್ವೇಷ ಬೆಳೆಯುವ ಅಥವಾ ದ್ವೇಷ ಹೇಳಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಪೀಠ ಎಚ್ಚರಿಸಿದೆ.

ವಕ್ಫ್‌ ಕಾಯ್ದೆ ವಿವಾದವನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್‌ ದೇಶವನ್ನು ಅರಾಜಕತೆಗೆ ಕೊಂಡೊಯ್ಯುತ್ತಿದೆ, ರಾಷ್ಟ್ರಪತಿಗಳಿಗೇ ಮಸೂದೆಗೆ ಸಹಿ ಹಾಕುವಂಥ ಆದೇಶ ನೀಡಿ ವ್ಯಾಪ್ತಿ ಮೀರುತ್ತಿದೆ. ದೇಶದಲ್ಲಿ ನಡೆಯುತ್ತಿರುವ ನಾಗರಿಕ ದಂಗೆಗೆ ಮುಖ್ಯ ನ್ಯಾಯಮೂರ್ತಿ ಸಿಜೆಐ ಸಂಜೀವ್‌ ಖನ್ನಾ ಕಾರಣ ಎಂದು ದುಬೆ ಆರೋಪಿಸಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ