;Resize=(412,232))
ನವದೆಹಲಿ: ಅಬಕಾರಿ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆ ಎದುರಿಸಿದ ವೇಳೆ ದೆಹಲಿಯ ಇಬ್ಬರು ಮಂತ್ರಿಗಳಾದ ಅತಿಷಿ ಹಾಗೂ ಸೌರಭ್ ಭಾರದ್ವಾಜ್ ಅವರ ಹೆಸರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಾಯಿಬಿಟ್ಟಿದ್ದಾರೆ ಎಂದು ಇ.ಡಿ. ಹೇಳಿಕೊಂಡಿದೆ.
ಈ ನಡುವೆ, ಅತಿಷಿ ಅವರನ್ನು ಈ ಬಗ್ಗೆ ಸುದ್ದಿಗಾರರು ಮಾತನಾಡಿಸಿದಾಗ, ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಯಾರು ಈ ನಾಯರ್?:ಜಾರಿ ನಿರ್ದೇಶನಾಲಯದ ಆರೋಪ ಪಟ್ಟಿಯ ಪ್ರಕಾರ, ವಿಜಯ್ ನಾಯರ್ ‘ಸೌತ್ ಗ್ರೂಪ್’ಗೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ. ದೆಹಲಿ ಅಬಕಾರಿ ಲೈಸೆನ್ಸ್ ಅನ್ನು ಬೇಕಾದವರಿಗೆ ಮಂಜೂರು ಮಾಡಿಸಲು 100 ಕೋಟಿ ರು. ಲಂಚವನ್ನು ಕೇಜ್ರಿವಾಲ್ ಸರ್ಕಾರಕ್ಕೆ ಕೊಡಿಸಿದ್ದ. ಪ್ರಕರಣದಲ್ಲಿ ಆರೋಪಿಯಾಗಿರುವ ಸಮೀರ್ ಮಹೇಂದ್ರು ಎಂಬಾತನಿಗೆ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ನಾಯರ್ ಸಮಯ ನಿಗದಿ ಮಾಡಿಸಿದ್ದ. ಆದರೆ ಭೇಟಿ ಸಾಧ್ಯವಾಗದೆ, ವಿಡಿಯೋ ಕಾಲ್ ಮೂಲಕ ಮಾತುಕತೆ ನಡೆದಿತ್ತು. ಆ ವೇಳೆ, ‘ನಾಯರ್ ನಮ್ಮ ಹುಡುಗ, ಆತನನ್ನು ನಂಬಬಹುದು. ಅವರ ಜತೆ ವ್ಯವಹಾರ ಮುಂದುವರಿಸಿಕೊಂಡು ಹೋಗಬಹುದು’ ಎಂದು ಕೇಜ್ರಿವಾಲ್ ತಿಳಿಸಿದ್ದರು.