ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ದೇಶದ ವಿವಿಧ ಕಡೆಯಿಂದ 1000 ರೈಲು!

KannadaprabhaNewsNetwork |  
Published : Dec 17, 2023, 01:45 AM IST
ಭಾರತೀಯ ರೈಲ್ವೆ | Kannada Prabha

ಸಾರಾಂಶ

ಮಂದಿರ ಉದ್ಘಾಟನೆಯಾಗಿ 100 ದಿನ ಸಂಚಾರ. ರಾಮಭಕ್ತರಿಗಾಗಿ ರೈಲ್ವೆ ಇಲಾಖೆ ವಿಶೇಷ ಸೌಕರ್ಯ.

ಎಲ್ಲೆಲ್ಲಿಂದ ರೈಲು?ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಪುಣೆ, ಕೋಲ್ಕತಾ, ನಾಗ್ಪುರ, ಲಖನೌ ಮತ್ತು ಜಮ್ಮು ಸೇರಿದಂತೆ ವಿವಿಧ ನಗರಗಳಿಂದ ಅಯೋಧ್ಯೆಗೆ ರೈಲುಗಳು ಸಂಚರಿಸಲಿವೆ. ರಾಮನ ದರ್ಶನ ಮಾಡಿ ಇದೇ ರೈಲುಗಳಲ್ಲಿ ಭಕ್ತರು ಮರಳಬಹುದು.

-----

ನವದೆಹಲಿ: ಶ್ರೀ ರಾಮಮಂದಿರ ಉದ್ಘಾಟನೆಯಾದ ಮೊದಲ 100 ದಿನಗಳ ಕಾಲ ಅಯೋಧ್ಯೆಗೆ ದೇಶದ ವಿವಿಧ ಭಾಗಗಳಿಂದ 1000 ರೈಲುಗಳನ್ನು ಓಡಿಸಲು ಭಾರತೀಯ ರೈಲ್ವೆ ಯೋಜನೆ ರೂಪಿಸಿದೆ.ಜ.22ರಂದು ಮಂದಿರದ ಉದ್ಘಾಟನೆ ನಡೆಯಲಿದ್ದು, ಜ.23ರಿಂದ ಭಕ್ತರಿಗೆ ದೇವಾಲಯ ತೆರೆಯಲಿದೆ. ಅದಕ್ಕೂ 4 ದಿನ ಮುಂಚೆಯೇ ಅಂದರೆ ಜ.19ರಿಂದ ಈ ರೈಲುಗಳ ಕಾರ್ಯಾಚರಣೆ ಆರಂಭವಾಗಲಿದೆ.ಅಯೋಧ್ಯೆ ರೈಲು ನಿಲ್ದಾಣವನ್ನು ನವೀಕರಿಸಲಾಗುತ್ತಿದ್ದು, ದಿನಕ್ಕೆ 50 ಸಾವಿರ ಜನರು ಸಂಚರಿಸುವ ಸಾಮರ್ಥ್ಯ ಹೊಂದಲಿದೆ. ಜ.15ರಂದು ನವೀಕೃತ ರೈಲು ನಿಲ್ದಾಣ ಸೇವೆಗೆ ಲಭ್ಯವಾಗಲಿದೆ ಎಂದು ಮೂಲಗಳು ಹೇಳಿವೆ.ಇದೇ ವೇಳೆ, ಯಾತ್ರಾರ್ಥಿಗಳು ಅಯೋಧ್ಯೆಗೆ ತಮ್ಮದೇ ಆದ ಬಾಡಿಗೆ ರೈಲನ್ನೂ ಬುಕ್‌ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇನ್ನು ಉದ್ಘಾಟನೆಯ ಆಸುಪಾಸಿನಲ್ಲಿ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯ ಭಕ್ತರು ಆಗಮಿಸಲಿರುವ ಕಾರಣ, ಭಕ್ತಾದಿಗಳಿಗೆ ಐಆರ್‌ಸಿಟಿಸಿ, ತಿಂಡಿ-ಊಟದ ಸೌಲಭ್ಯವನ್ನೂ ಕಲ್ಪಿಸಲಿದೆ.

ಇನ್ನು ರಾಮನ ಜನ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಪವಿತ್ರ ಸರಯೂ ನದಿಯಲ್ಲಿ ವಿದ್ಯುತ್ ಕ್ಯಾಟಮರನ್‌ನಲ್ಲಿ (ವಿಲಾಸಿ ಹಡಗು) ಸಂಚರಿಸಬಹುದಾಗಿದೆ. ಕ್ಯಾಟಮರನ್ 100 ಜನರಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ