18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯ: ರಾಜೀವ್‌ ಚಂದ್ರಶೇಖರ್‌

KannadaprabhaNewsNetwork |  
Published : Jun 10, 2024, 12:49 AM ISTUpdated : Jun 10, 2024, 05:02 AM IST
ರಾಜೀವ್‌  | Kannada Prabha

ಸಾರಾಂಶ

ನರೇಂದ್ರ ಮೋದಿ ಸರ್ಕಾರದ ಹೊಸ ಸಚಿವ ಸಂಪುಟ ರಚನೆ ಬೆನ್ನಲ್ಲೇ ತಮ್ಮ 18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

ತಿರುವನಂತಪುರಂ: ನರೇಂದ್ರ ಮೋದಿ ಸರ್ಕಾರದ ಹೊಸ ಸಚಿವ ಸಂಪುಟ ರಚನೆ ಬೆನ್ನಲ್ಲೇ ತಮ್ಮ 18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿದ ರಾಜೀವ್‌, ‘ಕರ್ನಾಟಕದಿಂದ 18 ವರ್ಷಗಳ ಕಾಲ ರಾಜ್ಯಸಭಾ ಸದಸ್ಯನಾಗಿ ಸಾರ್ವಜನಿಕ ಸೇವೆ ಮಾಡಿದ್ದೇನೆ. ಕಳೆದ ಮೂರು ವರ್ಷದಿಂದ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸೇವೆ ಮಾಡುವ ಅವಕಾಶ ಲಭಿಸಿದೆ. ಆದರೆ ನನ್ನ ಸಾರ್ವಜನಿಕ ಸೇವಾ ಜೀವನ ಈ ರೀತಿ ಸೋಲಿನೊಂದಿಗೆ ಅಂತ್ಯವಾಗುತ್ತದೆ ಎಂದು ಭಾವಿಸಿರಲಿಲ್ಲ’ ಎಂದು ಮನದಾಳ ಹಂಚಿಕೊಂಡಿದ್ದಾರೆ.

ಅಲ್ಲದೆ ಇನ್ನು ಮುಂದೆಯೂ ಸಹ ಬಿಜೆಪಿಯ ಕಾರ್ಯಕರ್ತರಾಗಿ ಪಕ್ಷದ ಏಳಿಗೆಗಾಗಿ ಶ್ರಮಿಸುವೆ. ಇಲ್ಲಿಯವರೆಗೂ ನನಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ರಾಜೀವ್‌ ಧನ್ಯವಾದ ಅರ್ಪಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ತಿರುವನಂತರಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಶಿ ತರೂರ್‌ ವಿರುದ್ಧ ರಾಜೀವ್‌ ಚಂದ್ರಶೇಖರ್‌ ಸೋಲನ್ನಪ್ಪಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ :ಹೊಸ ನಿಯಮದಲ್ಲೇನಿದೆ?
ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ